Monday, 12th May 2025

ಪೌರತ್ವ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಇಂದು

ವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಿರ್ಧರಿಸುವವ ರೆಗೆ 2024ರ ಪೌರತ್ವ ತಿದ್ದುಪಡಿ ನಿಯಮಗಳ ಅನುಷ್ಠಾನ ತಡೆಹಿಡಿಯಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ನಡೆಸಲಿದೆ.

ವಲಸೆ ಬಂದ ಹಿಂದೂಗಳಿಗೆ ಒಮ್ಮೆ ಭಾರತೀಯ ಪೌರತ್ವ ನೀಡಿದ ನಂತರ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಇಂಡಿಯನ್ ಯೂನಿ ಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಸಲ್ಲಿಕೆಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಗಮನಿಸಿದೆ.

ಕೇಂದ್ರವು ಪರಿಚಯಿಸಿದ ಮತ್ತು 2019ರಲ್ಲಿ ಸಂಸತ್ತು ಅಂಗೀಕರಿಸಿದ ಸಿಎಎ ನಿಯಮಗಳು, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದು 2014ರ ಡಿಸೆಂಬರ್ 31 ಕ್ಕಿಂತ ಮೊದಲು ಭಾರತಕ್ಕೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಗುರಿಯನ್ನು ಹೊಂದಿದೆ.

ಸಿಎಎ ಅಡಿಯಲ್ಲಿ ಕೇಂದ್ರವು ನಿಯಮಗಳನ್ನು ಹೊರಡಿಸಿದ ಒಂದು ದಿನದ ನಂತರ, ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಿಯಮಗಳ ಅನುಷ್ಠಾನ ತಡೆಹಿಡಿಯುವಂತೆ ಕೋರಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದೆ.

ಐಯುಎಂಎಲ್ ಜೊತೆಗೆ, ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ), ಅಸ್ಸಾಂ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ದೇಬಬ್ರತಾ ಸೈಕಾ, ಅಸ್ಸಾಂನ ಕಾಂಗ್ರೆಸ್ ಸಂಸದ ಅಬ್ದುಲ್ ಖಲೀಕ್ ಮತ್ತು ಇತರರು ಸಹ ಅರ್ಜಿಗಳನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *