Monday, 12th May 2025

ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ಬಿಜೆಪಿಗೆ ಸೇರ್ಪಡೆ

ನವದೆಹಲಿ: ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೋಮವಾರ ಸಂಜೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ.

ಲಂಡನ್‌ನಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡ ಸಿಂಗ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ತೊರೆದರು. ಇದರ ಬೆನ್ನಲ್ಲೇ ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ಸ್ಥಾಪಿಸಿದರು. ಇದೀಗ ಪಂಜಾಬಿ ವಿಧಾನಸಭಾ ಚುನಾವಣೆ ಯಲ್ಲಿ ಸ್ಪರ್ಧಿಸಲು ಪಂಜಾಬ್‌ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ.

ಅಮರೀಂದರ್ ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ.

ಪಂಜಾಬ್ ಲೋಕ ಕಾಂಗ್ರೆಸ್​ಗೆ ಸೇರ್ಪಡೆಗೊಂಡ 7 ಮಾಜಿ ಶಾಸಕರು ಮತ್ತು ಒಬ್ಬ ಮಾಜಿ ಸಂಸದರು ಕೂಡ ಬಿಜೆಪಿಗೆ ಸೇರಲಿದ್ದಾರೆ.