Monday, 12th May 2025

ಕ್ಯಾಪ್ಟನ್ ಅಂಶುಮಾನ್ ಸಿಂಗ್ ಪತ್ನಿ ಬಗ್ಗೆ ‘ಅಶ್ಲೀಲ ಮತ್ತು ಅವಹೇಳನಕಾರಿ’ ಹೇಳಿಕೆ: ಎಫ್‌ಐಆರ್ ದಾಖಲು

ವದೆಹಲಿ: ಕೀರ್ತಿ ಚಕ್ರ ಪ್ರಶಸ್ತಿ ಪುರಸ್ಕೃತ (ಮರಣೋತ್ತರ) ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ಅವರ ಬಗ್ಗೆ ‘ಅಶ್ಲೀಲ ಮತ್ತು ಅವಹೇಳನಕಾರಿ’ ಹೇಳಿಕೆ ನೀಡಿದ ಸೋಶಿಯಲ್ ಮೀಡಿಯಾ ಬಳಕೆದಾರರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯೂ) ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಫೋರ್ಸ್ನ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ (ಐಎಫ್‌ಎಸ್‌ಒ) ಘಟಕವು ಎಫ್‌ಐಆರ್ ದಾಖಲಿಸಿದೆ.

ಸಾಮಾಜಿಕ ಮಾಧ್ಯಮ ಬಳಕೆದಾರ ದೆಹಲಿ ನಿವಾಸಿಯಾಗಿದ್ದು, ಆತನ ವಿರುದ್ಧ ಬಿಎನ್‌ಎಸ್ ನ ಸೆಕ್ಷನ್ 79 (ಮಹಿಳೆಯ ಗೌರವವನ್ನು ಅವಮಾನಿಸುವ ಉದ್ದೇಶದ ಪದ / ಸನ್ನೆ / ಕೃತ್ಯ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯವನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೆಹಲಿಯ ನಿವಾಸಿ ಅಹ್ಮದ್ ಕೆ, ಫೋಟೋಗೆ ಅಸಭ್ಯ ಮತ್ತು ಅವಹೇಳನಕಾರಿ ಕಾಮೆಂಟ್ ಮಾಡಿದ್ದು, ಸ್ಕ್ರೀನ್ಶಾಟ್ ಅನ್ನು ರಾಷ್ಟ್ರೀಯ ಮಹಿಳಾ ಆಯೋಗ ಹಂಚಿಕೊಂಡು ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಮಹಿಳಾ ಆಯೋಗ ಪತ್ರ ಬರೆದಿತ್ತು.

Leave a Reply

Your email address will not be published. Required fields are marked *