Thursday, 15th May 2025

ಆಸ್ಪತ್ರೆಗೆ ತೆರಳುತ್ತಿದ್ದ ಕಾರಿಗೆ ಬೆಂಕಿ: ಗರ್ಭಿಣಿ ಪತ್ನಿ, ಪತಿ ಸಜೀವ ದಹನ

ಣ್ಣೂರು (ಕೇರಳ): ಕಣ್ಣೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಗರ್ಭಿಣಿ ಹಾಗೂ ಆಕೆಯ ಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಜೀವ ದಹನವಾಗಿದ್ದಾರೆ.

ಬಲಿಯಾದವರನ್ನು ಜಿಲ್ಲೆಯ ಕುಟ್ಟಿಯತ್ತೂರು ಮೂಲದ ಪ್ರಿಜಿತ್ (35) ಮತ್ತು ಅವರ ಪತ್ನಿ ರೀಶಾ (26) ಎಂದು ಗುರುತಿಸ ಲಾಗಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ರೀಷಾಳೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿ ದ್ದಾರೆ.

ತಕ್ಷಣ ಮಾಹಿತಿ ಪಡೆದ ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ಯನ್ನು ಸಂಪೂರ್ಣವಾಗಿ ನಂದಿಸಿ ಪ್ರಿಜಿತ್ ಮತ್ತು ರೀಶಾ ಅವರನ್ನು ಹೊರತೆಗೆದರು, ಆದರೆ ಅವರು ಅದಾಗಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದು, ವಾಹನಕ್ಕೆ ಬೆಂಕಿ ಹೊತ್ತಿಕೊಂಡಾಗ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಗು ಸೇರಿದಂತೆ ನಾಲ್ವರು ಪಾರಾಗಿದ್ದಾರೆ.

ಸಂತ್ರಸ್ತರ ಸಹ ಪ್ರಯಾಣಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಕಣ್ಣೂರು ನಗರ ಪೊಲೀಸ್ ಕಮಿಷನರ್ ಅಜಿತ್ ಕುಮಾರ್ ಮಾತನಾಡಿ, “ಅವರಿಗೆ ಯಾವುದೇ ಗಾಯಗಳಾಗಿಲ್ಲ, ಅವರು ಆಸ್ಪತ್ರೆಯಲ್ಲಿದ್ದಾರೆ ಮತ್ತು ಅವರನ್ನು ಪರಿಶೀಲಿಸ ಲಾಗುತ್ತಿದೆ” ಎಂದು ಹೇಳಿದರು.