Wednesday, 14th May 2025

ಉಪಮುಖ್ಯಮಂತ್ರಿ ಸಿಸೋಡಿಯಾ ನಿವಾಸ ಸೇರಿ 21 ಸ್ಥಳಗಳ ಮೇಲೆ ಸಿಬಿಐ ದಾಳಿ

ನವದೆಹಲಿ: ಶುಕ್ರವಾರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶ ಗಳಲ್ಲಿ 21 ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ ದಾಳಿ ನಡೆಸಿದೆ.

ಸಿಬಿಐ ಅಧಿಕಾರಿಗಳ ಹಲವು ತಂಡಗಳು ದೆಹಲಿ-ಎನ್ ಸಿಆರ್ ಪ್ರದೇಶಗಳಲ್ಲಿ 21 ಕಡೆ ಏಕಕಾಲಕ್ಕೆ ದಾಳಿ ಆರಂಭಿಸಿದ್ದಾರೆ. ಹಿಂದಿನ ದೆಹಲಿಯ ಅಬಕಾರಿ ಇಲಾಖೆ ಆಯುಕ್ತ ಅರವ ಗೋಪಿಕೃಷ್ಣ ಅವರ ನಿವಾಸ ಮೇಲೆ ಕೂಡ ದಾಳಿ ನಡೆದಿದೆ.

ಸಿಬಿಐ ಅಧಿಕಾರಿಗಳು ನನ್ನ ಮನೆಯಲ್ಲಿದ್ದಾರೆ. ನಾನು ತನಿಖಾ ಸಂಸ್ಥೆಯೊಂದಿಗೆ ಸಹಕರಿಸುತ್ತೇನೆ. ಅವರಿಗೆ ನನ್ನ ವಿರುದ್ಧ ಏನೂ ಸಾಕ್ಷಿಗಳು ಸಿಗುವುದಿಲ್ಲ ಎಂಬ ನಂಬಿಕೆ ನನಗಿದೆ. ನಾವು ಪ್ರಾಮಾಣಿಕರು, ಲಕ್ಷಾಂತರ ಮಕ್ಕಳ ಭವಿಷ್ಯವನ್ನು ನಿರ್ಮಿಸುತ್ತೇವೆ. ದುರದೃಷ್ಟಕರ ಸಂಗತಿ ಎಂದರೆ ಈ ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿ ತೊಂದರೆಯಾಗುತ್ತದೆ ಎಂದು ದೆಹಲಿಯ ಶಿಕ್ಷಣ ಸಚಿವ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.