Wednesday, 14th May 2025

ಅಕ್ರಮ ಗಣಿಗಾರಿಕೆ ಪ್ರಕರಣ: ಆಂಧ್ರ, ತೆಲಂಗಾಣ ಸೇರಿದಂತೆ 25 ಕಡೆ ದಾಳಿ

ಅಮರಾವತಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಸುಮಾರು 25 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಟಿಡಿಪಿ ಮುಖಂಡ, ಗುರಾಝಾಲಾ ಕ್ಷೇತ್ರದ ಮಾಜಿ ಶಾಸಕ ಯರಪತಿನೇನಿ ಶ್ರೀನಿವಾಸ್ ರಾವ್ ಹಾಗೂ ಇತರರ ಮನೆ, ಕಚೇರಿ ಸೇರಿರುವುದಾಗಿ ವರದಿ ತಿಳಿಸಿದೆ.

ಗುಂಟೂರು ಜಿಲ್ಲೆ ಹಾಗೂ ಹೈದರಾಬಾದ್ ನ ಸುಮಾರು 25 ಸ್ಥಳಗಳಲ್ಲಿ ಸಿಬಿಐ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಆಂಧ್ರಪ್ರದೇಶ ಸಿಬಿ-ಸಿಐಡಿ ಮಾಡಿಕೊಂಡ ಮನವಿ ಮೇರೆಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ರವಾನಿಸಿದ್ದು, ಅದನ್ನು ಅಂಗೀಕರಿಸಿದ ನಂತರ ಸಿಬಿಐ 17 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು ಎಂದು ವರದಿ ಹೇಳಿದೆ.

17 ಮಂದಿ ಆರೋಪಿಗಳು ಅಕ್ರಮವಾಗಿ ಹಾಗೂ ಅನಧಿಕೃತವಾಗಿ ಗಣಿಗಾರಿಕೆ ನಡೆಸುತ್ತಿದ್ದರು.

Leave a Reply

Your email address will not be published. Required fields are marked *