Sunday, 11th May 2025

ಕಡಲೂರು ಜಿಲ್ಲೆಯಲ್ಲಿ ಸರಣಿ ಅಪಘಾತ: ಐವರ ಸಾವು

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಮಂಗಳವಾರ ಆರು ವಾಹನಗಳ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸ್ ತಂಡ, ಮೃತರ ಗುರುತು ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ವಾಹನದ ಆರ್ಸಿ ಪರಿಶೀಲನೆ ವೇಳೆ ಕಾರು ಚೆನ್ನೈನಲ್ಲಿ ನೋಂದಣಿ ಮಾಡಿರುವುದು ಬೆಳಕಿಗೆ ಬಂದಿದೆ. ಎರಡು ಬಸ್ಗಳು, ಎರಡು ಟ್ರಕ್ಗಳು ಮತ್ತು ಎರಡು ಕಾರುಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಮೃತಪಟ್ಟಿರುವ ಐವರೂ ಒಂದೇ ಕಾರಿನಲ್ಲಿ ಪ್ರಯಾಣಿಸು ತ್ತಿದ್ದರು.

ಕಡಲೂರಿನ ವೇಪ್ಪೂರಿನ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯದಿಂದ ಮೃತದೇಹ ಗಳನ್ನು ಹೊರತೆಗೆಯಲಾಗಿದೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಲೂರು ಆಸ್ಪತ್ರೆಯಲ್ಲಿರಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Read E-Paper click here