Wednesday, 14th May 2025

ಬದೇರ್‌ವಾಹ್’ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ

ದೋಡಾ : ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಕುರಿತು ಜಮ್ಮುವಿನ ದೋಡಾ ಜಿಲ್ಲೆಯ ಬದೇರ್‌ವಾಹ್’ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ.

ಈ ಹಿನ್ನೆಲೆಯಲ್ಲಿ ಬದೇರ್‌ವಾಹ್’ನಲ್ಲಿ ಕರ್ಫ್ಯೂ ಜಾರಿಗೊಳಿಸಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಶುಕ್ರವಾರ ವರದಿಯಾಗಿದೆ.

ಬಡೆರ್ವಾಹ್‌ನಲ್ಲಿರುವ ಮಸೀದಿಯಿಂದ ಪ್ರಚೋದನಕಾರಿ ಘೋಷಣೆ ಮಾಡಲಾಗಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.

ಘಟನೆ ಸಂಬಂಧ ಭಾದರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಪ್ರತ್ಯೇಕ ಎಫ್‌ಐಆರ್ ಗಳನ್ನು ದಾಖಲಿಸ ಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕಿಶ್ತ್ವಾರ್ ಮತ್ತು ರಾಂಬನ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿ ಎಂದು ಪೊಲೀಸರು ತಿಳಿಸಿದ್ದಾರೆ.