Monday, 12th May 2025

ಆಗಸ್ಟ್ 15ರವರೆಗೆ ಪಶ್ಚಿಮ ಬಂಗಾಳದಲ್ಲಿ ಕೋವಿಡ್ ನಿರ್ಬಂಧ ಜಾರಿ

ಕೋಲ್ಕತ್ತ:  ಪಶ್ಚಿಮ ಬಂಗಾಳ ಸರ್ಕಾರವು ಸದ್ಯ ಜಾರಿಯಲ್ಲಿರುವ ಕೋವಿಡ್ ನಿರ್ಬಂಧಗಳನ್ನು ಆಗಸ್ಟ್ 15ರವರೆಗೆ ವಿಸ್ತರಿಸಿದೆ. ಕಳೆದ ಮೇ 16ರಂದು ಕೋವಿಡ್‌ ನಿರ್ಬಂಧಗಳನ್ನು ಜಾರಿಗೊಳಿಸಿದ್ದು, ಅದನ್ನು ಜು.30ರವರೆಗೆ ಮುಂದು ವರಿಸಲಾಗಿತ್ತು.

ಹೊಸ ಆದೇಶದ ಪ್ರಕಾರ, ಶೇ 50ರಷ್ಟು ಜನರೊಂದಿಗೆ ಒಳಾಂಗಣದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಪ್ರಯಾಣಿಕ ರೊಂದಿಗೆ ಬಸ್‌, ಟ್ಯಾಕ್ಸಿ, ಆಟೊರಿಕ್ಷಾಗಳು ಸಂಚರಿಸಬಹುದು. ಅರ್ಧದಷ್ಟು ಸಿಬ್ಬಂದಿಯೊಂದಿಗೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಕಾರ್ಯನಿರ್ವಹಿಸ ಬಹುದು.

‘ಕೋವಿಡ್‌ ಹೊಸ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ಸಾರ್ವಜನಿಕರು, ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ- 2005ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ’ ಎಂದು ಸರ್ಕಾರ ಎಚ್ಚರಿಸಿದೆ.

Leave a Reply

Your email address will not be published. Required fields are marked *