Sunday, 11th May 2025

ರಾಜನಾಥ್​ ಸಿಂಗ್‌ಗೆ ಕೊವಿಡ್​ 19 ಸೋಂಕು ದೃಢ

ವದೆಹಲಿ: ವಿಧಾನ ಸಭೆ ಚುನಾವಣಾ ಹೊಸ್ತಿಲಿನಲ್ಲೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್‌ಗೆ ಕೊವಿಡ್​ 19 ಸೋಂಕು ದೃಢಪಟ್ಟಿದ್ದು ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಲ್ಲಿ ಕರೋನಾದ ಸೌಮ್ಯ ಲಕ್ಷಣ ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಔಷಧ ತೆಗೆದುಕೊಳ್ಳುತ್ತಿದ್ದಾರೆ. ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚನೆ ನೀಡಿದ್ದಾರೆ.

ರಾಜನಾಥ್ ಸಿಂಗ್ ಅವರಿಗೆ ಕೊವಿಡ್​ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಂಡಿಯನ್ ಏರ್​ಫೋರ್ಸ್​ ಕಮಾಂಡರ್​ಗಳ ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಸೋಂಕು ಕಾಣಿಸಿಕೊಂಡಿದ್ದರಿಂದ ಅವರ ಪಾಲ್ಗೊಳ್ಳುವಿಕೆ ರದ್ದಾಗಿದೆ.