Tuesday, 13th May 2025

ಅಗ್ನಿ ಅವಘಡದಲ್ಲಿ 20 ಹಸುಗಳು ಸುಟ್ಟುಕರಕಲು

ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕಿನೌನಿ ಗ್ರಾಮದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 20 ಹಸುಗಳು ಸುಟ್ಟು ಕರಕಲಾಗಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗಾಜಿಯಾಬಾದ್ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸಿಂಗ್, ಮಾಹಿತಿ ಪ್ರಕಾರ 15 ರಿಂದ 20 ಹಸುಗಳು ಸಜೀವ ದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಟನೆ ವೇಳೆ ಸ್ಥಳದಲ್ಲಿ ಹಾಜರಿದ್ದ ಹಲವರು 50ಕ್ಕೂ ಅಧಿಕ ಹಸುಗಳು ಸುಟ್ಟುಕರಲಾಗಿವೆ ಎಂದು ತಿಳಿಸಿದ್ದಾರೆ.

ತನಿಖೆ ಕೈಗೊಂಡಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನೆಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.