Tuesday, 13th May 2025

ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಇಂದು

ಡೆಹ್ರಾಡೂನ್: ಉತ್ತರಾಖಂಡದ 11ನೇ ಮುಖ್ಯಮಂತ್ರಿ ಆಗಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಪ್ರಮಾಣವಚನ ಸ್ವೀಕರಿಸ ಲಿದ್ದಾರೆ.

ಎರಡನೇ ಬಾರಿ ರಾಜ್ಯದ ಸಿಎಂ ಆಗುತ್ತಿರುವ ಧಾಮಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಸಹ ಭಾಗ ವಹಿಸಲಿದ್ದಾರೆ. ಡೆಹ್ರಾಡೂನ್ ಪರೇಡ್ ಮೈದಾನದಲ್ಲಿ ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆರಂಭವಾಗಲಿದೆ. ನೂತನ ಮುಖ್ಯಮಂತ್ರಿ ಜೊತೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪದಗ್ರಹಣ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಧ್ಯಪ್ರದೇಶ ಮತ್ತು ಹರಿಯಾಣದ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ.