Sunday, 11th May 2025

ಮೈನ್‌ಪುರಿ ಉಪಚುನಾವಣೆ: ಗೆದ್ದ ಅಖಿಲೇಶ್ ಪತ್ನಿ ಡಿಂಪಲ್ ಯಾದವ್

ಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಪ್ರತಿನಿಧಿಸುತ್ತಿದ್ದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಭಾರೀ ಮುನ್ನಡೆ ಕಾಯ್ದು ಕೊಂಡಿದ್ದಾರೆ.

ಮೈನ್‌ ಪುರಿಯಲ್ಲಿ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರು ಶಿವಪಾಲ್ ಸಿಂಗ್ ಯಾದವ್ ಅವರ ನಿಕಟವರ್ತಿಯಾಗಿದ್ದ ಬಿಜೆಪಿಯ ರಘುರಾಜ್ ಸಿಂಗ್ ಶಾಕ್ಯಾ ವಿರುದ್ಧ ಕಣಕ್ಕಿಳಿದಿದ್ದಾರೆ.

ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ರಘುರಾಜ್ ಸಿಂಗ್ ಶಾಕ್ಯಾ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಮೈನ್‌ಪುರಿಯಲ್ಲಿ ಡಿಂಪಲ್ ಯಾದವ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರಘುರಾಜ್ ಸಿಂಗ್ ಶಾಕ್ಯಾ ಅವರಿಗಿಂತ 36,000 ಮತಗಳ ಮುನ್ನಡೆ ಸಾಧಿಸಿ ದ್ದಾರೆ. ಡಿಂಪಲ್ ಯಾದವ್ ಶೇಕಡಾ 69 ಕ್ಕಿಂತ ಹೆಚ್ಚು ಮತಗಳನ್ನು ಪಡೆದರು.

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದ ನಂತರ ತೆರವಾದ ಮೈನ್‌ಪುರಿ ಲೋಕಸಭಾ ಕ್ಷೇತ್ರದಲ್ಲಿ ಶೇ.54.01ರಷ್ಟು ಮತದಾನವಾಗಿದೆ.

ಉಪಚುನಾವಣೆಯು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮೈತ್ರಿಕೂಟದ ನಡುವೆ ನೇರ ಸ್ಪರ್ಧೆಗೆ ಸಾಕ್ಷಿಯಾಗಿದೆ.