Monday, 12th May 2025

ಒಳಚರಂಡಿ ಸಾವುಗಳ ಘಟನೆ: ಮೃತರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ

ವದೆಹಲಿ: ದೇಶದಲ್ಲಿ ಒಳಚರಂಡಿ ಸಾವುಗಳ ಘಟನೆಗಳ ಬಗ್ಗೆ ಕಠೋರ ದೃಷ್ಟಿಕೋನ ತೆಗೆದುಕೊಂಡ ಸುಪ್ರೀಂ ಕೋರ್ಟ್, ಒಳಚರಂಡಿಗಳನ್ನು ಸ್ವಚ್ಛ ಗೊಳಿಸುವಾಗ ಮೃತಪಡುವವರ ಕುಟುಂಬಗಳಿಗೆ ಸರ್ಕಾರ 30 ಲಕ್ಷ ರೂ.ಗಳ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ಶುಕ್ರವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಅರವಿಂದ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಒಳಚರಂಡಿಗಳನ್ನು ಸ್ವಚ್ಛ ಗೊಳಿಸುವಾಗ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದವರಿಗೆ ಕನಿಷ್ಠ ಪರಿಹಾರವಾಗಿ 20 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಹೇಳಿದೆ.

“ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಯಿಂದ ಮಲ ಹೊರುವ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದನ್ನು ಖಚಿತಪಡಿಸಿಕೊಳ್ಳ ಬೇಕು” ಎಂದು ನ್ಯಾಯಪೀಠ ಹೇಳಿದೆ.

ಕ್ಲೀನರ್ ಇತರ ಅಂಗವೈಕಲ್ಯಗಳಿಂದ ಬಳಲುತ್ತಿದ್ದರೆ ಅಧಿಕಾರಿಗಳು 10 ಲಕ್ಷ ರೂ.ಗಳವರೆಗೆ ಪಾವತಿಸಬೇಕಾಗುತ್ತದೆ ಎಂದು ತೀರ್ಪು ಪ್ರಕಟಿಸಿದ ನ್ಯಾ.ಭಟ್ ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸುವಾಗ 347 ಜನರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *