Sunday, 11th May 2025

ಈಸ್ಟ್ ಇಂಡಿಯಾ ಕಂಪನಿ ಕೂಡ ಇಂಡಿಯಾ ಹೆಸರನ್ನೇ ಇಟ್ಟುಕೊಂಡಿದೆ: ಮೋದಿ ಲೇವಡಿ

ನವದೆಹಲಿ: ಮುಜಾಹಿದ್ದೀನ್ ಉಗ್ರ ಸಂಘಟನೆ, ಭಾರತವನ್ನು ಲೂಟಿ ಹೊಡೆದ ಈಸ್ಟ್ ಇಂಡಿಯಾ ಕಂಪನಿ ಕೂಡ ಇಂಡಿಯಾ ಹೆಸರನ್ನೇ ಇಟ್ಟುಕೊಂಡಿತ್ತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿಪಕ್ಷಗಳು INDIA ಹೆಸರಿಟ್ಟ ಮಾತ್ರಕ್ಕೆ ಅದು ಭಾರತ ವಾಗುವುದಿಲ್ಲ . ಇದು ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ.

ವಿಪಕ್ಷಗಳ ಒಕ್ಕೂಟ ಯಾವುದೇ ನಿರ್ದೇಶನವಿಲ್ಲದೆ ಸಾಗುತ್ತಿದೆ. ಇಂಡಿಯಾ ಹೆಸರಿಟ್ಟು ಕೊಂಡು ಜನರ ಮನಸ್ಸಿನಲ್ಲಿ ಹತ್ತಿರ ವಾಗುವ ಕೆಲಸಕ್ಕೆ ಮುಂದಾಗಿದೆ. ಈ ಮೂಲಕ ಜನರ ದಿಕ್ಕು ತಪ್ಪಿಸುವ ಪ್ರಯತ್ನಗಳನ್ನು ಮಾಡುತ್ತಿದೆ ಎಂದರು.

ಪ್ರತಿಪಕ್ಷಗಳು ಸೋಲು, ದಣಿವು, ಹತಾಶರಾಗಿ ಮೋದಿಯನ್ನು ವಿರೋಧಿಸಬೇಕು ಎಂಬ ಒಂದೇ ಒಂದು ಅಜೆಂಡಾ ಇಟ್ಟುಕೊಂಡಿ ದ್ದಾರೆ ಎಂದು ಹೇಳಿದ್ದಾರೆ. ಅವರು ವಿಪಕ್ಷ ಗಳಾಗಿಯೇ ಉಳಿಯಲು ನಿರ್ಧರಿಸಿದಂತಿದೆ. 2024ರ ಚುನಾವಣೆಯಲ್ಲಿ ಜನಬೆಂಬಲ ದಿಂದ ಬಿಜೆಪಿ ಸುಲಭವಾಗಿ ಗೆಲುವು ಸಾಧಿಸಲಿದೆ ಎಂದರು.

ಜು.18 ರಂದು ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಒಕ್ಕೂಟ ಸಭಯಲ್ಲಿ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಜೆಡಿಯು, ಆರ್‌ಜೆಡಿ ಸೇರಿದಂತೆ 26 ಪಕ್ಷಗಳು ಪಾಲ್ಗೊಂಡಿತ್ತು.

Leave a Reply

Your email address will not be published. Required fields are marked *