Sunday, 11th May 2025

ನಾಳೆ ಕಾಪು, ಉಡುಪಿಯಲ್ಲಿ ಏಕನಾಥ್ ಶಿಂಧೆ ಪ್ರಚಾರ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡಿವೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದು ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.

“ಏಕನಾಥ್ ಶಿಂಧೆ ಅವರು ಕಾಪು ಮತ್ತು ಉಡುಪಿಯಲ್ಲಿ ನಡೆಯಲಿರುವ ಬಿಜೆಪಿ ಪಥ ಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಉಡುಪಿ ತಲುಪುವ ಮುನ್ನವೇ ಶಿಂಧೆ, ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ದೇವಸ್ಥಾನದ ಧರ್ಮಾಧಿ ಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ.

ಆ ಬಳಿಕ, ಮುಖ್ಯಮಂತ್ರಿಗಳು ಉಡುಪಿಯ ಶ್ರೀಕೃಷ್ಣ ದೇವಾಲಯಕ್ಕೂ ಭೇಟಿ ನೀಡಲಿದ್ದು, ಸೋಮವಾರವೇ ಮಹಾರಾಷ್ಟ್ರಕ್ಕೆ ಮರಳಲಿದ್ದಾರೆ” ಎಂದು ಪಕ್ಷದ ಮೂಲಗಳು ತಿಳಿಸಿವೆ.

ಚುನಾವಣೆಗೂ ಮುನ್ನವೇ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಅಭ್ಯರ್ಥಿಗಳಿಗೆ ವಿಶೇಷ ಮನವಿ ಯೊಂದನ್ನು ಮಾಡಿದ್ದಾರೆ. ಕರ್ನಾಟಕದ ನೆಲವನ್ನು ಫಲವತ್ತಾಗಿಸಲು ವಿಶೇಷ ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.