Monday, 12th May 2025

ಬಾರಾಮುಲ್ಲದಲ್ಲಿ ಗುಂಡಿನ ಚಕಮಕಿ: ಭಯೋತ್ಪಾದಕನ ಹತ್ಯೆ

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

ಉಗ್ರರ ವಿರುದ್ಧ ಭದ್ರತಾ ಪಡೆಗಳ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬಾರಾಮುಲ್ಲ, ಸೋಪೊರೆ ಮಾತ್ರವಲ್ಲದೇ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತುಜ್ಜಾನ್ ಪ್ರದೇಶದಲ್ಲಿಯೂ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

 

ಕಾಶ್ಮೀರದ ಹಲವು ಕಡೆಗಳಲ್ಲಿ ಸರಣಿ ಎನ್‌ಕೌಂಟರ್‌ಗಳು ನಡೆಯುತ್ತಿದ್ದು, ಅನೇಕ ಭಯೋತ್ಪಾದಕರನ್ನು ಮಟ್ಟಹಾಕಲಾಗಿದೆ. ಹೆಚ್ಚಿನ ಕಾರ್ಯಾಚರಣೆಗಳನ್ನು ಗುಪ್ತಚರ ವರದಿಗಳನ್ನು ಆಧರಿಸಿ ಪೊಲೀಸರು ಹಾಗೂ ಸೇನಾ ಪಡೆಗಳು ಜಂಟಿಯಾಗಿ ನಡೆಸಿವೆ.

ಕುಪ್ವಾರ, ಕುಲ್ಗಾಂ ಹಾಗೂ ಪುಲ್ವಾಮ ಜಿಲ್ಲೆಗಳಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ಗಳಲ್ಲಿ 7 ಉಗ್ರರನ್ನು ಹತ್ಯೆ ಮಾಡ ಲಾಗಿತ್ತು.