Tuesday, 13th May 2025

ಕುಸ್ತಿಪಟು ಬಬಿತಾ ಫೋಗಟ್ ವಿರುದ್ಧ ಪ್ರಕರಣ ದಾಖಲು

ಬಾಗ್‌ಪತ್: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಾಗಿ ಬಾಗ್‌ಪತ್‌ನ ಬರೌತ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದ ಕುಸ್ತಿಪಟು ಬಬಿತಾ ಫೋಗಟ್ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಚಾರದ ವೇಳೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳು ಮತ್ತು ಕರೋನಾ ನಿಯಮ ಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕುಸ್ತಿಪಟು ಬಬಿತಾ ಫೋಗಟ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬಾಗ್‌ಪತ್‌ನ ಬರೌತ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣಪಾಲ್ ಎಸ್ ಮಲಿಕ್ ಪರ ಫೋಗಟ್ ಪ್ರಚಾರ ನಡೆಸುತ್ತಿದ್ದರು. ಈ ಪ್ರಕರಣದಲ್ಲಿ 63 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕೋವಿಡ್ ಪ್ರಕರಣಗಳ ಉಲ್ಬಣದ ಮಧ್ಯೆ, ಚುನಾವಣಾ ಆಯೋಗವು ಭೌತಿಕ ರ್ಯಾಲಿಗಳು ಮತ್ತು ರೋಡ್‌ಶೋಗಳ ಮೇಲಿನ ನಿಷೇಧವನ್ನು ಜ.31 ರವರೆಗೆ ವಿಸ್ತರಿಸಿದೆ.

ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಫೆಬ್ರವರಿ 10, ಎರಡನೇ ಹಂತ ಫೆಬ್ರವರಿ 14, ಮೂರನೇ ಹಂತ ಫೆಬ್ರವರಿ 20, ನಾಲ್ಕನೇ ಹಂತ ಫೆಬ್ರವರಿ 23, ಐದನೇ ಹಂತ ಫೆಬ್ರವರಿ 27, ಆರನೇ ಹಂತ ಮಾರ್ಚ್ 3 ಮತ್ತು ಮಾರ್ಚ್ 3 ರಂದು ಹಾಗೂ ಏಳನೇ ಹಂತ ಮಾರ್ಚ್ 7 ರಂದು ನಡೆಯಲಿದೆ.