Sunday, 11th May 2025

ಗುಜರಾತ್ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಅಹಮದಾಬಾದ್: ಅಹಮದಾಬಾದ್ನ ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ದ್ದಾರೆ. ದುಷ್ಕರ್ಮಿಗಳು ಹಾಸ್ಟೆಲ್ ಕೊಠಡಿಯನ್ನು ಧ್ವಂಸಗೊಳಿಸಿ, ಕಲ್ಲುಗಳನ್ನು ಎಸೆದರು ಎನ್ನಲಾಗಿದೆ.

“ಕಳೆದ ರಾತ್ರಿ ಗುಜರಾತ್ ವಿಶ್ವವಿದ್ಯಾಲಯದ ಕ್ಯಾಂಪಸಿನಲ್ಲಿ, ಇತರ ದೇಶಗಳ ವಿದ್ಯಾರ್ಥಿಗಳ ಮೇಲೆ ಅಪರಿಚಿತ ದಾಳಿಕೋರರು ಹಲ್ಲೆ ನಡೆಸಿ ಧ್ವಂಸ ಗೊಳಿಸಿದ್ದಾರೆ.

ಪೊಲೀಸರು ತಕ್ಷಣ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಹಮದಾಬಾದ್ ಪೊಲೀಸರು ಭಾನುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಮ್ಮ ತಂಡಗಳು ಘಟನಾ ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿವೆ ಮತ್ತು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *