Sunday, 11th May 2025

ನಕಲಿ ಮದ್ಯ ಸೇವಿಸಿ ನಾಲ್ವರು ಸಾವು

ಸಿವಾನ್: ಬಿಹಾರದ ಸಿವಾನ್ ಜಿಲ್ಲೆಯ ಭಗವಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ.

ಇತ್ತೀಚೆಗೆ ಛಾಪ್ರಾ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿ ದ್ದಾರೆ.

ಏಪ್ರಿಲ್ 2016 ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿತು.

ಈ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ, ಸಿಎಂ ನಿತೀಶ್‌ ಕುಮಾರ್‌ ಹಾಗೂ ಮಹಾಘಟ ಬಂದನ್‌ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪ್ರತಿಪಕ್ಷಗಳು, ವಿಶೇಷವಾಗಿ ಬಿಜೆಪಿ ಗುರಿಯಾಗಿಸುತ್ತಿದೆ.

ಛಾಪ್ರಾ ದುರಂತದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಅಕ್ರಮ ಮದ್ಯದ ತಯಾರಿಕೆ, ವ್ಯಾಪಾರ ಮತ್ತು ಮಾರಾಟ ತಡೆಯಲು ಸ್ವತಂತ್ರ ತನಿಖೆ ಮತ್ತು ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಮನವಿಯಲ್ಲಿ ಕೋರಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವನ್ನೂ ಕೋರಿದೆ.