Wednesday, 14th May 2025

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್ ಇಂದಿನಿಂದ

ನವದೆಹಲಿ: ಇಂದಿನಿಂದ 75 ದಿನಗಳವರೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದಿಂದ ಮೊದಲ ಮತ್ತು 2ನೇ ಡೋಸ್ ಲಸಿಕೆಯನ್ನು ದೇಶದ ಜನತೆಗೆ ಉಚಿತವಾಗಿ ನೀಡಲಾಗಿತ್ತು. ಆ ಬಳಿಕ ಆರಂಭಿಸಿದ ಬೂಸ್ಟರ್ ಡೋಸ್ ಅನ್ನು ಹಿರಿಯ ನಾಗರೀಕರಿಗೆ ಮಾತ್ರವೇ ಉಚಿತವಾಗಿ ನೀಡಲಾಗುತ್ತಿತ್ತು.

ಭಾರತವು ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ. ಆಜಾದಿ ಕಾ ಅಮೃತ್ ಕಾಲ್ ಸಂದರ್ಭದಲ್ಲಿ, ಜುಲೈ 15 ರಿಂದ ಮುಂದಿನ 75 ದಿನಗಳವರೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಬೂಸ್ಟರ್ ಡೋಸ್‌ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದರು.