Monday, 12th May 2025

ಉಚಿತ ಪಡಿತರ ಯೋಜನೆ ಮತ್ತೆ 3 ತಿಂಗಳಿಗೆ ವಿಸ್ತರಣೆ: ಯೋಗಿ

ಲಖನೌ: ಕಳೆದ ಶುಕ್ರವಾರ ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ  ಯೋಗಿ ಆದಿತ್ಯನಾಥ್​ ಉಚಿತ ಪಡಿತರ ಯೋಜನೆಯನ್ನು ಮತ್ತೆ 3 ತಿಂಗಳವರೆಗೆ ವಿಸ್ತರಣೆ ಮಾಡಿ ದ್ದಾರೆ.

ಶನಿವಾರ ಸುದ್ದಿಗೋಷ್ಠಿ ನಡೆಸಿದ ಸಿಎಂ ಯೋಗಿ, ಪ್ರಧಾನ ಮಂತ್ರಿ ಗರೀಬ್​ ಕಲ್ಯಾಣ ಅನ್ನ ಯೋಜನೆಯನ್ನು ಮಾರ್ಚ್ 31ರಿಂದ​ ಜೂನ್​ 30ರವರೆಗೆ ವಿಸ್ತರಣೆ ಮಾಡುವುದಾಗಿ ತಿಳಿಸಿದರು. ಇದರಿಂದ ರಾಜ್ಯದ 15 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ಹೇಳಿದರು.

ಯೋಜನೆಯು ಪ್ರತಿ ಮನೆಗೆ ತಿಂಗಳಿಗೆ ಹೆಚ್ಚುವರಿಯಾಗಿ ಐದು ಕೆಜಿ ಆಹಾರ ಧಾನ್ಯವನ್ನು ಒದಗಿಸುತ್ತದೆ. ಸಿಎಂ ಯೋಗಿ ಆದಿತ್ಯ ನಾಥ್ ಅವರ ಹೊಸ ಸಚಿವ ಸಂಪುಟದ ಮೊದಲ ನಿರ್ಧಾರ ಇದಾಗಿದ್ದು, ಇದು ಪಾರದರ್ಶಕವಾಗಿ ಜಾರಿಯಾಗಲಿದೆ ಎಂದು ತಿಳಿಸಿದರು.

ಉತ್ತರಪ್ರದೇಶದಲ್ಲಿ ಮೂರು ತಿಂಗಳ ಕಾಲ ಉಚಿತ ಪಡಿತರ ನೀಡಲಾಗುವುದು. ಬಡವರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳು ಜನರಿಗೆ ತಲುಪಬೇಕು ಎಂದು ನೂತನ ಉಪಮುಖ್ಯ ಮಂತ್ರಿ ಬ್ರಿಜೇಶ್ ಪಾಠಕ್ ಹೇಳಿದ್ದಾರೆ.