Wednesday, 14th May 2025

ಏಳನೇ ಬಾರಿ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರ

#Petrol #Diesel

ನವದೆಹಲಿ: ಪೆಟ್ರೋಲ್ ದರ ಲೀಟರ್‍ಗೆ 80 ಪೈಸೆ ಮತ್ತು ಡೀಸೆಲ್ 70 ಪೈಸೆ ಮಂಗಳವಾರ ಮತ್ತೆ ಏರಿಕೆಯಾಗಿದೆ.

ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂಪಾಯಿ, ಬೆಂಗಳೂರಿನಲ್ಲಿ 105 ರೂ ಗೆ ಏರಿಕೆಯಾಗಿದೆ. ಮಾ.22 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ನಿರಂತರ ಹೆಚ್ಚಳವಾಗುತ್ತಿದೆ. ಎಂಟು ದಿನಗಳಲ್ಲಿ ಇದು ಏಳನೇ ಏರಿಕೆಯಾಗಿದ್ದು, ಇದರೊಂದಿಗೆ ಪೆಟ್ರೋಲ್ ಬೆಲೆ ಸುಮಾರು 4.90 ರೂ. ಏರಿಕೆಯಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದಾಗಿ ತೈಲ ಬೆಲೆ ನಿರಂತರವಾಗಿ ಏರುತ್ತಿದೆ. ಸೋಮವಾರ ರಾಜ್ಯಸಭೆಯಲ್ಲಿ, ಪೆಟ್ರೋಲ್ ಬೆಲೆ ಏರಿಕೆ ಯಿಂದ ಗಗನಕ್ಕೇರುತ್ತಿರುವ ಹಣದುಬ್ಬರ ವಿಷಯದ ಕುರಿತು ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದವು.

ತೈಲ ಬೆಲೆ ಏರಿಕೆಯಿಂದ ಸಾರಿಗೆ ಸೇರಿದ ವಿವಿಧ ವಯಯಗಲ ಮೇಲೆ ಭಾರಿ ಪರಿಣಾಮ ಬೀರಿದೆ.