Thursday, 15th May 2025

ಇಂಧನ ದರ ಸ್ಥಿರ: ನವದೆಹಲಿಯಲ್ಲಿ ಲೀಟರ್​ಗೆ 8 ರೂ. ಕಡಿಮೆ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಬುಧವಾರ ಕೂಡಾ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಎರಡು ತಿಂಗಳು ಇಂಧನ ದರ ಸ್ಥಿರವಾಗಿದೆ.

ದೆಹಲಿಯ ಕೇಜ್ರಿವಾಲ್ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ಅನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ. ಕಡಿಮೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಬುಧವಾರದಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ನಂತರ ದೇಶದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.

ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ.