ನವದೆಹಲಿ: ದೆಹಲಿಯಲ್ಲಿ ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಂತ್ಯಕ್ರಿಯೆ ಶನಿವಾರ ಪಾಟ್ನಾದಲ್ಲಿ ಜರುಗಲಿದೆ.
ಶುಕ್ರವಾರ ಪಾರ್ಥೀವ ಶರೀರವನ್ನು ದೆಹಲಿಯ ನಿವಾಸಕ್ಕೆ ತರಲಾಗಿದ್ದು, ನಂತರ ಪಾಟ್ನಾಕ್ಕೆ ತಂದು ಪಕ್ಷದ ಕಚೇರಿಯಲ್ಲಿ ಕೆಲ ಕಾಲ ಇಡಲಾಗುವುದು ಎಂದು ಹೇಳಲಾಗುತ್ತಿದೆ.
ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಅವರ ನಿಧನಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ . ನಡ್ಡಾ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತಾ ಶಾ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವು ನಾಯಕರು ಇಂದು ಬೆಳಗ್ಗೆ ರಾಮ್ ವಿಲಾಸ್ ಪಾಸ್ವಾನ್ ಅವರ ನಿವಾಸಕ್ಕೆ ತೆರಳಿ ಅವರ ಅಂತಿಮ ದರ್ಶನ ಪಡೆದರು.