Sunday, 11th May 2025

ಗ್ಯಾಸ್ ಸಿಲಿಂಡರ್​ ಸ್ಫೋಟ: ಏಳು ಜನರು ಸುಟ್ಟು ಕರಕಲು

ಸಿವಾನ್ : ಜಿಲ್ಲೆಯ ಬಲ್ವಾನ್​ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಮಗು ಸೇರಿದಂತೆ ಏಳು ಜನರು ಸುಟ್ಟು ಕರಕಲಾದ ಘಟನೆ ನಡೆದಿದೆ.

ಮಂಗಳವಾರ ತಡರಾತ್ರಿ ಘಟನೆ ನಡೆದಿದ್ದು, ಸಿಲಿಂಡರ್ ಸ್ಫೋಟದಿಂದಾಗಿ ಮನೆಯಲ್ಲಿನ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಮನೆಯವರೆಲ್ಲ ಊಟ ಮಾಡಿ ಮಲಗಿದ್ದರು. ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಡುಗೆ ಕೋಣೆಯ ಬಾಗಿಲು ತೆರೆದಾಗ ಸ್ಫೋಟ ಸಂಭವಿಸಿದೆ ಎನ್ನಲಾಗುತ್ತಿದೆ.

ಘಟನೆ ನಂತರ ಎಲ್ಲಾ ಗಾಯಾಳುಗಳನ್ನು ಸಿವಾನ್ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.