Sunday, 11th May 2025

ಫೆ.5ರಂದು ಗೇಟ್ ಪರೀಕ್ಷೆ

#GATE2022

ನವದೆಹಲಿ: ಸುಪ್ರೀಂ ಕೋರ್ಟ್ ಎಂಜಿನಿಯರಿಂಗ್ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ (GATE) ಪರೀಕ್ಷೆ ಮುಂದೂಡಲು ನಿರಾಕರಿಸಿದೆ.

ಕೋವಿಡ್ ನಿರ್ಬಂಧನೆ ನಡುವೆ ಫೆ.5ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಅದೇ ದಿನ ನಡೆಸಲು ಕೋರ್ಟ್ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ವಿಕ್ರಮ್ ನಾಥ್ ಅವರನ್ನೊಳ ಗೊಂಡ ನ್ಯಾಯಪೀಠ, ಗೇಟ್ ಪರೀಕ್ಷೆ ನಿಗದಿ ಯಾಗಿರುವ ಕೇವಲ 48 ಗಂಟೆ ಮೊದಲು ಮುಂದೂಡು ವುದು ವಿದ್ಯಾರ್ಥಿಗಳಲ್ಲಿ ಗೊಂದಲವನ್ನುಂಟು ಮಾಡುತ್ತದೆ. ಶೈಕ್ಷಣಿಕ ಮತ್ತು ಔದ್ಯೋಗಿಕ ಭವಿಷ್ಯದ ಮೇಲೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಯಾವಾಗ ಪರೀಕ್ಷೆ ನಡೆಸಬೇಕೆಂಬುದು ಶೈಕ್ಷಣಿಕ ನೀತಿಯಾಗಿದ್ದು, ಈ ವಿಷಯದಲ್ಲಿ ನ್ಯಾಯಾಲಯ ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಹೇಳಿದೆ.

ಗೇಟ್ ಪರೀಕ್ಷೆಯಲ್ಲಿ 9 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದು, ಸುಮಾ#ರು 20 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವಂತೆ ಆನ್ ಲೈನ್ ನಲ್ಲಿ ಸಹಿ ಹಾಕಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಎಂಜಿನಿಯರಿಂಗ್ ಪದವಿ ತರಗತಿಗಳಲ್ಲಿನ ವಿಷಯಗಳು ಮತ್ತು ವಿಜ್ಞಾನಕ್ಕೆ ಸಂಬಂಧಪಟ್ಟ ವಿಷಯ ಗಳನ್ನು ಅಧ್ಯಯನ ಮಾಡಿ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ತರಗತಿಗಳ ಪ್ರವೇಶಕ್ಕೆ ಮತ್ತು ಕೆಲವು ಸಾರ್ವಜನಿಕ ವಲಯ ಘಟಕಗಳಲ್ಲಿ ನೇಮಕಾತಿಗೆ ಗೇಟ್ ಪರೀಕ್ಷೆ ನಡೆಸಲಾಗುತ್ತದೆ.