Wednesday, 14th May 2025

ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಿಕ್ಕರ್ ಹೆಸರಿಡಲು ಅನುಮೋದನೆ

ಗೋವಾ: ಗೋವಾದ ಮೊಪಾದಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಾಜಿ ರಕ್ಷಣಾ ಸಚಿವ ಮತ್ತು ನಾಲ್ಕು ಬಾರಿ ಗೋವಾದ ಮುಖ್ಯಮಂತ್ರಿ ಆಗಿದ್ದ ಮನೋಹರ್ ಪರಿಕ್ಕರ್ ಅವರ ಹೆಸರಿಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪರಿಕ್ಕರ್ ಅವರ ಗೌರವ ಸೂಚಕವಾಗಿ ಗೋವಾದ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ʻಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣʼ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಗೋವಾದ ಮೊಪಾದಲ್ಲಿ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು 2022 ರ ಡಿಸೆಂಬರ್‌ನಲ್ಲಿ ಉದ್ಘಾಟಿಸಿ ದರು. ಆಧುನಿಕ ಗೋವಾವನ್ನು ನಿರ್ಮಿಸುವಲ್ಲಿ ಅವರ ಕೊಡುಗೆಯನ್ನು ಗುರುತಿಸಿ ದಿವಂಗತ ಮನೋಹರ್ ಪರಿಕ್ಕರ್ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲಾಗಿದೆ ಎಂದು ಹೇಳಿಕೆ ತಿಳಿಸಿದೆ.

 
Read E-Paper click here