Wednesday, 14th May 2025

ತೂಗು ಸೇತುವೆ ಕುಸಿತ ಪ್ರಕರಣ: ನ.14 ರಂದು ವಿಚಾರಣೆ

ನವದೆಹಲಿ: ಗುಜರಾತ್ ನ ಮೊರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ ಕುಸಿತ ಪ್ರಕರಣದ ಕುರಿತು, ನ್ಯಾಯಾಂಗ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ.14 ರಂದು ವಿಚಾರಣೆ ನಡೆಸಲಿದೆ.

ಶತಮಾನದಷ್ಟು ಹಳೆಯದಾದ ತೂಗು ಸೇತುವೆ ಭಾನುವಾರ ಕುಸಿದು ಬಿದ್ದ ಪರಿಣಾಮ 135 ಜನರು ಮೃತಪಟ್ಟಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಘಟನಾ ಸ್ಥಳಕ್ಕೆ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.