Sunday, 11th May 2025

ಮಹಾರಾಷ್ಟ್ರದಲ್ಲಿ ನಿರಂತರ ಮಳೆ: ಹಲವೆಡೆ ರೆಡ್ ಅಲರ್ಟ್ ಘೋಷಣೆ

ಮುಂಬೈ: ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಆವರಿಸಿದ್ದು, ಪೂರ್ವ ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾರಾಷ್ಟ್ರದ ವಿದರ್ಭ ಪ್ರದೇಶದ ಭಾಗಗಳಿಗೆ ರೆಡ್ ಮತ್ತು ಆರೆಂಜ್ ಎಚ್ಚರಿಕೆ ನೀಡಿದೆ.

ಮುಂದಿನ ಐದು ದಿನಗಳ ಕಾಲ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂಬೈ ಆಗಸ್ಟ್ 8 ರಿಂದ ಆಗಸ್ಟ್ 11 ರವರೆಗೆ ‘ಆರೆಂಜ್’ ಅಲರ್ಟ್‌ ನಲ್ಲಿರುತ್ತದೆ. ಮಹಾರಾಷ್ಟ್ರದ ವಿವಿಧೆಡೆ ಭಾನುವಾರದಿಂದ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.