Tuesday, 13th May 2025

ರಾಷ್ಟ್ರಪತಿ ಚುನಾವಣೆ: ಲಾಲೂ ಸ್ಫರ್ಧೆ, ಮಾಜಿ ಸಿಎಂ ಅಲ್ಲ..!

ನವದೆಹಲಿ: ಮುಂಬರುವ ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಯಲ್ಲಿ ಸ್ಪರ್ಧಿಸಲು ಚುನಾವಣಾ ಆಯೋಗವು ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭಿಸಿದೆ ಮತ್ತು ಕೊನೆಯ ದಿನಾಂಕವನ್ನು ಜೂ.29 ಎಂದು ನಿಗದಿಪಡಿಸಿದ್ದು, ಲಾಲು ಪ್ರಸಾದ್ ಯಾದವ್ ಕೂಡ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅಲ್ಲ. ಅದೇ ಹೆಸರಿನ ಮತ್ತೊಬ್ಬ ವ್ಯಕ್ತಿ ಬಿಹಾರದ ಸರನ್ ಜಿಲ್ಲೆಯ ನಿವಾಸಿ. ಇವರು ಜೂ. 15 ರಂದು ನಾಮಪತ್ರ ಸಲ್ಲಿಸಲು ಮುಂದಾಗಿದ್ದು, ದೆಹಲಿಗೆ ತೆರಳಲು ವಿಮಾನ ಟಿಕೆಟ್ ಬುಕ್ ಮಾಡಿರುವುದಾಗಿಯೂ ಹೇಳಿಕೊಂಡಿದ್ದಾರೆ.

ಯಾದವ್ 2017 ರಲ್ಲಿಯೂ ಕೂಡ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.

ನನಗೆ 42 ವರ್ಷ ವಯಸ್ಸಾಗಿದ್ದು, ಜೀವನೋಪಾಯಕ್ಕಾಗಿ ಕೃಷಿಯನ್ನು ಅವಲಂಬಿಸಿ ದ್ದೇನೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ನನಗೆ ಏಳು ಮಂದಿ ಮಕ್ಕಳಿದ್ದಾರೆ. ಅದರಲ್ಲಿ ಹಿರಿಯ ಮಗಳಿಗೆ ಮದುವೆಯಾಗಿದೆ ಎಂದು ತಿಳಿಸಿದ್ದಾರೆ.