Thursday, 15th May 2025

ಗಸ್ತು ತಿರುಗುತ್ತಿದ್ದ ಸೈನಿಕರು ಕಮರಿಗೆ ಜಾರಿ ಬಿದ್ದು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಗಸ್ತು ತಿರುಗುತ್ತಿದ್ದ ಮೂವರು ಸೈನಿಕರು ಆಳವಾದ ಕಮರಿಗೆ ಜಾರಿಬಿದ್ದು ದುರ್ಮರಣಕ್ಕೀಡಾಗಿದ್ದಾರೆ.

ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಮೂವರು ಸೈನಿಕರು ದೈನಂದಿನ ಗಸ್ತು ತಿರುಗುತ್ತಿದ್ದಾಗ ಹಿಮಪಾತಕ್ಕೆ ಸಿಲುಕಿ ಕಮರಿಗೆ ಜಾರಿ ಬಿದ್ದಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಲ್ಲ ಮೂವರು ಯೋಧರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಚಿನಾರ್ ಕಾರ್ಪ್ಸ್ ತಿಳಿಸಿದೆ.

Read E-Paper click here