Monday, 12th May 2025

ಭಾರೀ ಮಳೆ, ಹಿಮಪಾತ: ಕೇದಾರನಾಥ ಯಾತ್ರೆಗೆ ತಾತ್ಕಾಲಿಕ ತಡೆ

ಡೆಹ್ರಾಡೂನ್: ಹಿಮಾಲಯದ ಎತ್ತರದ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತ ವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಮುಂದಿನ 2-3 ದಿನಗಳವರೆಗೆ ಎಚ್ಚರಿಕೆ ನೀಡಿದೆ.

ಕೇದಾರನಾಥಕ್ಕೆ ಭೇಟಿ ನಿಡಲು ಬರುವ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಮನವಿ ಮಾಡ ಲಾಗುತ್ತಿದೆ. ಹವಾಮಾನ ಉತ್ತಮವಾಗು ವವರೆಗೆ ಪ್ರಯಾಣಿಕರು ಅದೇ ಸ್ಥಳದಲ್ಲಿ ಇರಿ. ಮುಂಜಾಗೃತ ಕ್ರಮಗಳನ್ನು ಅನುಸರಿಸಿಯೇ ಯಾತ್ರೆಯನ್ನು ಮುಂದುವರಿಸಿ ಎಂದು ರುದ್ರಪ್ರಯಾಗದ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಹೇಳಿದರು.

ಕೇದಾರನಾಥ ಧಾಮದಲ್ಲಿ ನಿರಂತರವಾಗಿ ಹಿಮಪಾತವಾಗುತ್ತಿದ್ದು, ಯಾತ್ರೆಯನ್ನು ನಿಯಂತ್ರಿಸಲಾಗುತ್ತಿದೆ. ಎಲ್ಲ ಪ್ರಯಾಣಿಕರು ತಮ್ಮ ಸುರಕ್ಷತೆಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಹೊರಡಿಸಿರುವ ಮಾರ್ಗಸೂಚಿ ಗಳನ್ನು ಅನುಸರಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಹವಾಮಾನ ಉತ್ತಮವಾದ ಬಳಿಕ ಮಾತ್ರ ಎಲ್ಲಾ ಯಾತ್ರಾರ್ಥಿಗಳು ಕೇದಾರನಾಥಕ್ಕೆ ತಮ್ಮ ಪ್ರಯಾಣವನ್ನು ಬೆಳೆಸಬಹುದು ಎಂದು ದೀಕ್ಷಿತ್ ಹೇಳಿದ್ದಾರೆ.