Monday, 12th May 2025

ಏ.15 ರಂದು ಅರವಿಂದ್ ಕೇಜ್ರಿವಾಲ್ ಅರ್ಜಿ ವಿಚಾರಣೆ

ವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಏ.15 ರಂದು ವಿಚಾರಣೆ ನಡೆಸಲಿದೆ.

ಅಬಕಾರಿ ಹಗರಣದಲ್ಲಿ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಕೇಜ್ರಿ ವಾಲ್ ಗುರುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ದೆಹಲಿ ಮುಖ್ಯಮಂತ್ರಿ ಸುಪ್ರೀಂ ಕೋರ್ಟ್ ನಲ್ಲಿ ತುರ್ತು ವಿಚಾರಣೆಗಾಗಿ ವಿನಂತಿಸಿದರು ಆದರೆ ಸುಪ್ರೀಂಕೋರ್ಟ್ ಏ.15 ಕ್ಕೆ ವಿಚಾರಣೆ ನಿಗದಿಪಡಿಸಿದೆ. ಯಾವುದೇ ವಿಶೇಷ ಪೀಠವನ್ನು ರಚಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಮತ್ತು ಕೇಜ್ರಿ ವಾಲ್ ಅವರ ಮನವಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರಿಗೆ ಮೇಲ್ ಮಾಡುವಂತೆ ಕೇಳಿದೆ.

ಆಮ್ ಆದ್ಮಿ ಪಕ್ಷ (ಎಎಪಿ) ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದು, ಮದ್ಯ ಹಗರಣವು ಕೇಜ್ರಿವಾಲ್ ಅವರನ್ನು ಜೈಲಿಗೆ ತಳ್ಳಲು ಮತ್ತು ತಮ್ಮ ಪಕ್ಷವನ್ನು ಮುಗಿಸಲು ಕೇಂದ್ರದ ದೊಡ್ಡ ಪಿತೂರಿಯಾಗಿದೆ ಎಂದು ಹೇಳಿದೆ.

Leave a Reply

Your email address will not be published. Required fields are marked *