Sunday, 11th May 2025

ಕೇರಳ ಹೈಕೋರ್ಟ್​ ಮೆಟ್ಟಿಲೇರಿರುವ ಬಿಜೆಪಿ ಅಭ್ಯರ್ಥಿಗಳು

ತಿರುವನಂತಪುರಂ: ಏಪ್ರಿಲ್​ 6ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದ್ದ ನಾಮಪತ್ರಗಳನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ ಕ್ರಮವನ್ನು ಪ್ರಶ್ನಿಸಿ ಭಾನುವಾರ ಕೇರಳ ಹೈಕೋರ್ಟ್​ ಮೆಟ್ಟಿಲೇರಿರುವ ಬಿಜೆಪಿ ಅಭ್ಯರ್ಥಿಗಳು ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದೆ.

ಕೇರಳ ವಿಧಾನಸಭಾ ಚುನಾವಣೆಯ ಮತದಾನಕ್ಕೂ ಮುನ್ನವೇ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಕೇರಳ ವಿಧಾನಸಭಾ ಕ್ಷೇತ್ರಗಳಲ್ಲಿ ಸಲ್ಲಿಕೆಯಾಗಿದ್ದು, ಎನ್​ಡಿಎ ಅಭ್ಯರ್ಥಿಗಳ ನಾಮಪತ್ರ ಚುನಾವಣಾ ಅಧಿಕಾರಿಗಳಿಂದ ತಿರಸ್ಕೃತ ಗೊಂಡಿದೆ.

ಥಲಸ್ಸೆರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮತ್ತು ಕಣ್ಣೂರಿನ ಪಕ್ಷದ ಅಧ್ಯಕ್ಷ ಎನ್​ ಹರಿದಾಸ್​ ನಾಮಪತ್ರವನ್ನು ತಿರಸ್ಕರಿಸ ಲಾಗಿದೆ. ನಾಮಪತ್ರದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಹಿ ಹೊಂದಿಲ್ಲ ಎಂಬ ಕಾರಣ ನೀಡಲಾಗಿದೆ. ಗುರುವಾಯೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮಹಿಳಾ ಮೊರ್ಚಾದ ರಾಜ್ಯಾಧ್ಯಕ್ಷೆ ನಿವೇದಿತಾ ಸುಬ್ರಮಣಿಯಂ ನಾಮಪತ್ರವೂ ಇದೇ ಕಾರಣ ನೀಡಿಯೇ ತಿರಸ್ಕರಿಸಲಾಗಿದೆ. ಇಡುಕ್ಕಿಯ ದೇವಿಕುಲಂ ಕ್ಷೇತ್ರದಲ್ಲಿ ಎಐಎಡಿಎಂಕೆ ಅಭ್ಯರ್ಥಿ ಧನಲಕ್ಷ್ಮಿ ನಾಮಪತ್ರವನ್ನು ಅಪೂರ್ಣ ಎಂಬ ಕಾರಣ ನೀಡಿ ತಿರಸ್ಕರಿಸಲಾಗಿದೆ.

ನ್ಯಾಯಮೂರ್ತಿ ಎನ್.ನಾಗರೇಶ್ ಅವರು ಸೋಮವಾರ ಪ್ರತಿ-ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದರು.

Leave a Reply

Your email address will not be published. Required fields are marked *