Monday, 12th May 2025

ಗಣರಾಜ್ಯೋತ್ಸವಕ್ಕೆ ಲಡಾಖ್ ನ ಟ್ಯಾಬ್ಲೋ ಪ್ರದರ್ಶನ

ನವದೆಹಲಿ: ಗಣರಾಜ್ಯೋತ್ಸವದ ದಿನ ದೆಹಲಿಯ ರಾಜಪಥದಲ್ಲಿ ಪರೇಡ್‌ನಲ್ಲಿ ಲಡಾಖ್ ನ ಟ್ಯಾಬ್ಲೋ ಭಾಗವಹಿಸಲಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದರು.

ಲಡಾಖ್‌ನ ಟ್ಯಾಬ್ಲೋ ಲೇಹ್ ಜಿಲ್ಲೆಯ ಥಿಕ್ಸೆ ಬೆಟ್ಟದ ಮೇಲಿರುವ ಸುಂದರ ಥಿಕ್ಸೆ ಮಠವನ್ನು ಒಳಗೊಂಡಿರಲಿದೆ. ಲೇಹ್ ಬಳಿಯ ಹ್ಯಾನ್ಲೆನಲ್ಲಿರುವ ಭಾರತೀಯ ಖಗೋಳ ವೀಕ್ಷಣಾಲಯವನ್ನು ಸಹ ಒಳಗೊಂಡಿದೆ.

ಕೇಂದ್ರ ಸರ್ಕಾರವು 2019 ರ ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಾಗಿಸಿದೆ. ಜನವರಿ 26 ರಂದು ನಡೆಯುವ ವಾರ್ಷಿಕ ಪೆರೇಡ್ ನಲ್ಲಿ ಭಾರತ ತನ್ನ ಮಿಲಿಟರಿ ಸಾಮರ್ಥ್ಯವನ್ನು ಪ್ರದರ್ಶಿಸಲು ಸಜ್ಜಾಗಿದೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ಟ್ಯಾಬ್ಲೋ ಹಾಗೂ ರಾಫೇಲ್ ಯುದ್ಧ ವಿಮಾನಗಳು 2021 ರ ಗಣರಾ ಜ್ಯೋತ್ಸವ ಮೆರವಣಿಗೆಯಲ್ಲಿ ಪ್ರಮುಖ ಆಕರ್ಷಣೆಗಳಾಗಿವೆ.

ಒಂಬತ್ತನೇ ಸಿಖ್ ಗುರು ಶ್ರೀ ಗುರು ತೇಜ್ ಬಹದ್ದೂರ್ ಅವರ ಸರ್ವೋಚ್ಚ ತ್ಯಾಗದ ವಿಷಯ ಪಂಜಾಬಿನ ಟ್ಯಾಬ್ಲೋ ಪ್ರದರ್ಶಿಸಿದ್ದರೆ ಉತ್ತರಾಖಂಡದ ‘ಕೇದಾರಖಂಡ್’ ಅನ್ನು ಆ ರಾಜ್ಯದ ಟ್ಯಾಬ್ಲೋ ಪ್ರದರ್ಶಿಸಲಿದೆ. ಕರ್ನಾಟಕದ ಟ್ಯಾಬ್ಲೋ ವಿಜಯನಗರ ಸಾಮ್ರಾಜ್ಯದ ವೈಭವವನ್ನು ಸಾರುವ ಹಂಪಿಯ ಸ್ಮಾರಕದ ಪ್ರತಿಕೃತಿಯನ್ನು ಹೊಂದಿರಲಿದೆ.

 

Leave a Reply

Your email address will not be published. Required fields are marked *