Sunday, 11th May 2025

ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್ ಘಟಕ ಪತ್ತೆ

ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಿಷೇಧಿತ ಲಷ್ಕರ್ ಇ ತೊಯ್ಬಾ ಭಯೋತ್ಪಾದಕ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಏಳು ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದಲ್ಲಿ ಮದ್ದು ಗುಂಡುಗಳು ಮತ್ತು ಶಸಾಸ್ತ್ರಗಳನ್ನು ವಶ ಪಡಿಸಿಕೊಳ್ಳ ಲಾಗಿದೆ ಎಂದು ಹೇಳಿದ್ದಾರೆ. ನಾಲ್ಕು ದ್ವಿಚಕ್ರವಾಹನಗಳು ಸೇರಿದಂತೆ ಆರು ವಾಹನಗಳನ್ನು ಕಾರ್ಯಚರಣೆ ವೇಳೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.