Thursday, 15th May 2025

ಮಥುರಾದಲ್ಲಿ ಮದ್ಯ, ಮಾಂಸ ಮಾರಾಟ ನಿಷೇಧಿಸಿದ ಸಿಎಂ ಯೋಗಿ

ಮಥುರಾ: ಉತ್ತರ ಪ್ರದೇಶ ರಾಜ್ಯದ ಮಥುರಾ ಪ್ರದೇಶವನ್ನು ಹಿಂದೂಗಳ ಪುಣ್ಯ ಕ್ಷೇತ್ರ ಎಂದು ಪರಿಗಣಿಸ ಲಾಗುತ್ತದೆ. ಹೀಗಾಗಿ ಉತ್ತರ ಪ್ರದೇಶದ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ ಎಂದು ವರದಿಯಾಗಿದೆ. ಮಥುರಾದಲ್ಲಿ ನಡೆದ ಕೃಷ್ಣೋತ್ಸವ-2021 ಕಾರ್ಯಕ್ರಮದಲ್ಲಿ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಯೋಗಿ ಆದಿತ್ಯನಾಥ್‌, “ಮದ್ಯ ಮಾಂಸ ನಿಷೇಧಕ್ಕಾಗಿ ಯೋಜನೆಗಳನ್ನು ರೂಪಿಸಲು ಮತ್ತು ಇಂತಹ ವ್ಯಾಪಾರಗಳಲ್ಲಿ ತೊಡಗಿರುವ ಜನರನ್ನು ಗುರುತಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ” ಎಂದು ತಿಳಿಸಿ ದ್ದಾರೆ.

ಮದ್ಯ ಮತ್ತು ಮಾಂಸ ವ್ಯಾಪಾರದಲ್ಲಿ ತೊಡಗಿರುವವರು ತಮ್ಮ ವ್ಯಾಪಾರವನ್ನು ತೊರೆಯಬೇಕು. ಅತಿ ಹೆಚ್ಚು ಪ್ರಮಾಣದಲ್ಲಿ ಪ್ರಾಣಿಗಳ ಹಾಲನ್ನು ಉತ್ಪಾದಿಸ ಲಾಗುತ್ತದೆ. ಹೀಗಾಗಿ, ಮಥುರಾ ವೈಭವವನ್ನು ಪುನರು ಜ್ಜೀವನ ಗೊಳಿಸಲು ಎಲ್ಲರೂ ಹಾಲಿನ ಮಾರಾಟ ಕೈಗೊಳ್ಳಬಹುದು” ಎಂದು ಸಲಹೆ ನೀಡಿದ್ದಾರೆ.

ಯಮುನಾ ನದಿ ತೀರದಲ್ಲಿರುವ ಬ್ರಿಜ್ ಭೂಮಿಯನ್ನು ಅಭಿವೃದ್ಧಿಪಡಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತದೆ. ಇದಕ್ಕೆ ಯಾವುದೇ ಹಣದ ಕೊರತೆ ಇರುವುದಿಲ್ಲ. ಪ್ರದೇಶದ ಅಭಿವೃದ್ಧಿಗೆ ಆಧುನಿಕ ತಂತ್ರಜ್ಞಾನದೊಂದಿಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯ ಮಿಶ್ರಣ ನೋಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. ಬಹಳ ಹಿಂದಿನಿಂದಲೂ ನಿರ್ಲಕ್ಷಿಸಲ್ಪಟ್ಟ ನಂಬಿಕೆಯ ಸ್ಥಳಗಳು ಈಗ ಪುನರುಜ್ಜೀವನಗೊಳ್ಳುತ್ತಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *