Wednesday, 14th May 2025

ವಿಷಪೂರಿತ ಮದ್ಯ ಸೇವಿಸಿ ಮಹಿಳೆ ಸೇರಿ 10 ಜನ ಸಾವು

ತಮಿಳುನಾಡು: ರಾಜ್ಯದ ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ನಕಲಿ ವಿಷ ಪೂರಿತ ಮದ್ಯ ಸೇವಿಸಿ ಮೂವರು ಮಹಿಳೆ ಯರು ಸೇರಿದಂತೆ ಒಟ್ಟು 10 ಜನ ಮೃತಪಟ್ಟಿ ದ್ದಾರೆ.

ವಿಲ್ಲುಪುರಂ ಜಿಲ್ಲೆಯ ಮರಕ್ಕನಂ ಬಳಿಯ ಎಕ್ಕಿಯಾರ್ಕುಪ್ಪಂನ ಆರು ಮಂದಿ ಮೃತ ಪಟ್ಟಿದ್ದಾರೆ. ಚೆಂಗಲ್ಪಟ್ಟು ಜಿಲ್ಲೆಯ ಮಧುರಾಂತಗಮ್‌ನಲ್ಲಿ ಶುಕ್ರವಾರ ಇಬ್ಬರು ಮತ್ತು ಭಾನುವಾರ ದಂಪತಿ ಸಾವನ್ನಪ್ಪಿದ್ದಾರೆ. ಎಲ್ಲರೂ ಅಕ್ರಮ ಮದ್ಯ ಸೇವನೆಯಿಂದಲೇ ಮೃತಪಟ್ಟಿದ್ದಾರೆ.

ಐಜಿ ಎನ್.ಕಣ್ಣನ್, “ತಮಿಳುನಾಡಿನ ಉತ್ತರ ವಲಯದಲ್ಲಿ ನಕಲಿ ಮದ್ಯ ಸೇವನೆಯ ಎರಡು ಪ್ರತ್ಯೇಕ ಘಟನೆಗಳು ವರದಿ ಯಾಗಿವೆ. ಒಂದು ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಮತ್ತೊಂದು ವಿಲ್ಲುಪುರಂ ಜಿಲ್ಲೆಯಲ್ಲಿ. ಮರಕ್ಕನಂ ಬಳಿಯ ವಿಲ್ಲುಪುರಂ ಜಿಲ್ಲೆಯ ಎಕ್ಕಿಯಾರ್ಕುಪ್ಪಂ ಗ್ರಾಮದಲ್ಲಿ ನಿನ್ನೆ 6 ಮಂದಿಗೆ ವಾಂತಿ, ಕಣ್ಣು ಉರಿ, ತಲೆತಿರುಗುವಿಕೆ ಕಂಡುಬಂದು ಆಸ್ಪತ್ರೆಗೆ ದಾಖಲಾ ಗಿದ್ದರು.

ಅವರಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಾಲ್ವರು ಮೃತಪಟ್ಟಿದ್ದು, ಇಬ್ಬರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದ್ರೆ, ಅವರಿಬ್ಬರೂ ಸಹ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಒಟ್ಟು 33 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.