Wednesday, 14th May 2025

ಮಾ.14 ರಂದು ’ಲೋಕ’ ಚುನಾವಣೆ ದಿನಾಂಕ ಘೋಷಣೆ…!

ವದೆಹಲಿ: ನಿರೀಕ್ಷಿತ ಲೋಕಸಭಾ ಚುನಾವಣೆ 2024ರ ದಿನಾಂಕಗಳನ್ನು ಮಾ.14 ಅಥವಾ 15 ರಂದು ಘೋಷಿಸುವ ಸಾಧ್ಯತೆಯಿದೆ.

2019 ರಂತೆ ಏಳು ಹಂತಗಳಲ್ಲಿ ಚುನಾವಣೆ ನಡೆಯಬಹುದು ಮತ್ತು ಮೊದಲ ಹಂತದ ಮತದಾನವು ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು ಎನ್ನಲಾಗಿದೆ. ಮೊದಲ ಹಂತದ ಮತದಾನ ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು ಎಂದು ಮೂಲಗಳು ತಿಳಿಸಿವೆ. 2019ರಂತೆಯೇ ಈ ಬಾರಿ ಯೂ 7 ಹಂತ ಗಳಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ. ಮಾ.13, 2024 ರ ನಂತರ ಚುನಾವಣಾ ಆಯೋಗವು ದಿನಾಂಕಗಳನ್ನು ಪ್ರಕಟಿಸಲಿದೆ.

ಮಾ.13 ರೊಳಗೆ, ಭಾರತದ ಚುನಾವಣಾ ಆಯೋಗವು ರಾಜ್ಯಗಳಲ್ಲಿ ತನ್ನ ಮೌಲ್ಯಮಾಪನವನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ. ಸುಮಾರು 97 ಕೋಟಿ ಭಾರತೀಯರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ.

2024 ರ ಲೋಕಸಭಾ ಚುನಾವಣೆಯ ಜೊತೆಗೆ, ಆಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಒಡಿಶಾದಂತಹ ರಾಜ್ಯಗಳು ಆಯಾ ರಾಜ್ಯ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಲಿವೆ. ಇದರ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಶೀಘ್ರದಲ್ಲೇ ಪ್ರಕಟಿಸಲಿದೆ.

Leave a Reply

Your email address will not be published. Required fields are marked *