Monday, 12th May 2025

ಕೂಲಿ ಕಾರ್ಮಿಕರ ಮೇಲೆ ಲಾರಿ ಹರಿದು, ಮಹಿಳೆಯರ ಸಾವು

ಶ್ರೀಕಾಕುಳಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಅಮದಲವಲ ಮಂಡಲದ ಮಂಡಾಡಿಯಲ್ಲಿ ಕೂಲಿ ಕಾರ್ಮಿಕರ ಮೇಲೆ ಲಾರಿ ಹರಿದಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಡಾಡಿಯಲ್ಲಿ ವಿಜಯನಗರದಿಂದ ಕಾಶಿ ಪಟ್ಟಣಕ್ಕೆ ತೆರಳುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾ ಜನಕವಾಗಿದೆ. ಗಾಯಾಳುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಮದಾ ಳವಲ ಸಬ್ ಇನ್ಸ್ ಪೆಕ್ಟರ್ ಕೃಷ್ಣ ತಿಳಿಸಿದ್ದಾರೆ.

ಸುಮಾರು 200 ಕಾರ್ಮಿಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ಚಾಲಕ ಹೇಳಿಕೊಂಡಿದ್ದು, ಲಾರಿ ಚಾಲಕ ಪೊಲೀಸರಿಗೆ ಶರಣಾಗಿದ್ದಾನೆ.