Monday, 12th May 2025

ಮತ್ತೆ ಸಿಲಿಂಡರ್‌ ಬೆಲೆ ಏರಿಕೆಯ ಶಾಕ್‌…!

ನವದೆಹಲಿ: ಬೆಲೆ ಏರಿಕೆಯಿಂದ ಬಸವಳಿದಿರುವ ಗ್ರಾಹಕರಿಗೆ ಮತ್ತೆ ಸಿಲಿಂಡರ್‌ ಬೆಲೆ ಏರಿಕೆಯ ಶಾಕ್‌ ನೀಡಲಾಗಿದೆ.

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ರೂ. 3.50, ವಾಣಿಜ್ಯ ಸಿಲಿಂಡರ್‌ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ, ಗೃಹಬಳಕೆಯ ಸಿಲಿಂಡರ್‌ಗಳ ದರವು 1000 ರೂಪಾಯಿ ಆಗಿದೆ. ಮೇ 19 ರಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಈ ತಿಂಗಳು ಎರಡನೇ ಬಾರಿಗೆ ಹೆಚ್ಚಿಸ ಲಾಗಿದೆ.

ದೇಶಾದ್ಯಂತದ ಬಹುತೇಕ ಎಲ್ಲಾ ನಗರಗಳಲ್ಲಿ ದೇಶೀಯ ಸಿಲಿಂಡರ್‌ನ ಬೆಲೆ ಈಗ 1000 ರೂಪಾಯಿ ಆಗಿದೆ. ಏರಿಕೆಯೊಂದಿಗೆ ದೆಹಲಿ ಮತ್ತು ಮುಂಬೈ ನಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1003 ರೂ., ಕೋಲ್ಕತ್ತಾದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1029 ರೂ., ಮತ್ತು ಚೆನ್ನೈ ನಲ್ಲಿ ಇಂದಿನಿಂದ 1018.5 ರುಪಾಯಿ ಆಗಿದೆ.

ಮೇ 7ರಂದು ಸಿಲಿಂಡರ್ ಬೆಲೆ 50 ರೂ. ಏರಿಕೆಯಾಗಿತ್ತು. ಗೃಹಬಳಕೆಯ ಸಿಲಿಂಡರ್ ಜತೆಗೆ ವಾಣಿಜ್ಯ ಸಿಲಿಂಡರ್ ಕೂಡ ದುಬಾರಿಯಾಗಿತ್ತು.