Sunday, 11th May 2025

Maharashtra Accident: ಬಸ್‌ ಪಲ್ಟಿಯಾಗಿ ಹನ್ನೆರಡು ಜನ ಸ್ಥಳದಲ್ಲೇ ಸಾವು; ಹಲವರ ಸ್ಥಿತಿ ಗಂಭೀರ

Maharashtra Tragedy

ಮುಂಬೈ: ಮಹಾರಾಷ್ಟ್ರದ (Maharashtra Accident)ದಲ್ಲಿ ಬಸ್ಸೊಂದು ಪಲ್ಟಿಯಾಗಿದ್ದು, 12ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಂಡಾರಾದಿಂದ ಗೊಂಡಿಯಾಕ್ಕೆ ತೆರಳುತ್ತಿದ್ದ ಬಸ್ ಜಿಲ್ಲೆಯ ಬಿಂದ್ರವನ ತೋಲಾ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇನ್ನು ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ (Maharashtra Tragedy).

ಬಸ್ಸು ಭಂಡಾರಾ ಡಿಪೋದಿಂದ ಗೊಂಡಿಯಾಗೆ ತೆರಳುತ್ತಿದ್ದಾಗ ಟೋಲಾ ಗ್ರಾಮದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತವಾದ ಸ್ಥಳದಲ್ಲಿಯೇ ಎಂಟು ಮಂದಿ ಮೃತ ಪಟ್ಟಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 30 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಗೊಂಡಿಯಾ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತರಿಗೆ ₹10 ಲಕ್ಷ ಪರಿಹಾರ ಘೋಷಣೆ

ಮುಖ್ಯಮಂತ್ರಿಗಳ ಕಚೇರಿ (ಸಿಎಂಒ)ದ ಮಾಹಿತಿಯ ಪ್ರಕಾರ, ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮೃತರ ಕುಟುಂಬಕ್ಕೆ ತಕ್ಷಣ 10 ಲಕ್ಷ ರೂ. ಪರಿಹಾರ ನೀಡುವಂತೆ ಸಾರಿಗೆ ಆಡಳಿತಕ್ಕೆ ಆದೇಶಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ಅಪಘಾತದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಅಪಘಾತದ ಬಗ್ಗೆ ಸಂತಾಪ ಸೂಚಿಸಿರುವ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್‌ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಸ್ ಅಪಘಾತದಲ್ಲಿ ಕೆಲ ಪ್ರಯಾಣಿಕರು ಮೃತಪಟ್ಟಿದ್ದು ಅತ್ಯಂತ ದುರದೃಷ್ಟಕರವಾಗಿದೆ. ನಾನು ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡಿರುವ ಜನರು ಅಗತ್ಯಬಿದ್ದರೆ ಕೂಡಲೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಅಗತ್ಯವಿದ್ದಲ್ಲಿ ಅವರನ್ನು ನಾಗ್ಪುರಕ್ಕೆ ಸ್ಥಳಾಂತರಿಸಲು ವ್ಯವಸ್ಥೆ ಮಾಡುವಂತೆ ಗೊಂಡಿಯಾ ಜಿಲ್ಲಾಧಿಕಾರಿಗೂ ತಿಳಿಸಿದ್ದೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ : Viral Video: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗ್ತಿದ್ದ ಮಹಿಳೆಯ ಜೀವ ಕಸಿದ ‘ಯಮಸ್ವರೂಪಿ’ ಕಾರು – ಅಪ್ರಾಪ್ತನಿಂದ ನಡೆಯಿತೇ ಈ ಅಪಘಾತ..!?