Wednesday, 14th May 2025

ಮಲ್ಯ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆ ನಾಳೆ

ನವದೆಹಲಿ: ಉದ್ಯಮಿ ವಿಜಯ್ ಮಲ್ಯ ಅವರ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆ ಯನ್ನು ಸುಪ್ರೀಂ ಕೋರ್ಟ್  ಗುರುವಾರಕ್ಕೆ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ರವೀಂದ್ರ ಎಸ್ ಭಟ್, ಪಿ ಎಸ್ ನರಸಿಂಹ ಅವರ ನೇತೃತ್ವದ ನ್ಯಾಯಪೀಠ ಹಿರಿಯ ವಕೀಲ ಜೈದೀಪ್ ಗುಪ್ತ ಅವರ ಮನವಿ ಮೇರೆಗೆ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ತನ್ನ ಮಕ್ಕಳಿಗೆ 40 ಮಿಲಿಯನ್ ಡಾಲರ್ ಹಣವನ್ನು ವರ್ಗಾಯಿಸಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಜಯ್ ಮಲ್ಯ ಅವರನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿ ವೈಯಕ್ತಿಕವಾಗಿ ನ್ಯಾಯಾಲಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೊಟೀಸ್ ನೀಡಿತ್ತು.

ಕಳೆದ ಫೆಬ್ರವರಿ 10ರಂದು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಜಯ್ ಮಲ್ಯ ಅವರಿಗೆ ಖುದ್ದು ಹಾಜರಾಗಲು ಅಥವಾ ಕೌನ್ಸೆಲ್ ಮೂಲಕ ವಿಚಾರಣೆಗೆ ಹಾಜರಾಗಲು ಎರಡು ವಾರ ಸಮಯಾವಕಾಶ ನೀಡಿತ್ತು.