Wednesday, 14th May 2025

ಮನೀಶ್ ಸಿಸೋಡಿಯಾ ಕಸ್ಟಡಿ ಮಾ.6 ರವರೆಗೆ ವಿಸ್ತರಣೆ

ವದೆಹಲಿ : ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ಆದೇಶವನ್ನು ನಗರ ನ್ಯಾಯಾಲಯವು ಶನಿವಾರ ಕಾಯ್ದಿರಿಸಿದ್ದು, ಕಸ್ಟಡಿಯನ್ನು ಮಾರ್ಚ್ 6 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ರೆವಿನ್ಯೂ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು.

ಸಿಬಿಐ ಬಂಧನ ಅವಧಿಯನ್ನು ರೋಸ್ ಅವೆನ್ಯೂ ಕೋರ್ಟ್ ಇಂದು ಸಿಸೋಡೊಯಾ ಅವರ ಜಾಮೀನು ಅರ್ಜಿಯ ವಿಚಾರಣೆಯ ದಿನಾಂಕವನ್ನ ದೆಹಲಿಯ ರೂಸ್ ಅವೆನ್ಯೂ ಶನಿವಾರ ನಿಗದಿಪಡಿಸಿದೆ. ದೆಹಲಿ ಕ್ಯಾಬಿ ನೆಟ್ ಮತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಸೋಡಿಯಾ ಅವ್ರನ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನ ದೆಹಲಿ ನ್ಯಾಯಾಲಯ ಮಾರ್ಚ್ 10 ಕ್ಕೆ ನಿಗದಿಪಡಿಸಿದೆ.