ನವದೆಹಲಿ: ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಗುರುವಾರ ದೆಹಲಿ ಏಮ್ಸ್ ನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ತಮ್ಮ ದೂರದೃಷ್ಟಿಯಿಂದಾಗಿ ದೇಶದ ಆರ್ಥಿಕತೆಯ ದಿಕ್ಕನ್ನೇ ಬದಲಿಸಿದ ಅವರು ಆರ್ಥಿಕತೆಯ ಹರಿಕಾರ ಅನ್ನಿಸಿಕೊಂಡವರು. ಸ್ವಭಾವತಃ ಮಿತಭಾಷಿಯಾಗಿದ್ದ ಸಿಂಗ್ ಮೌನ ಸಾಧಕ. ಅವರ ನಿಧನದಿಂದಾಗಿ ಇಡೀ ದೇಶದಲ್ಲಿ ಶೋಕದ ಅಲೆ ಎದ್ದಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಯಿಂದ ಹಿಡಿದು ವಿರೋಧ ಪಕ್ಷದ ನಾಯಕರೆಲ್ಲರೂ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಇಂದು ಬೆಳಗ್ಗೆ ಸಚಿವ ಸಂಪುಟ ಸದಸ್ಯರೆಲ್ಲರೂ ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಅವರ ಗೌರವಾರ್ಥ ಕೇಂದ್ರ ಸರ್ಕಾರ ದೇಶದಾದ್ಯಂತ 7 ದಿನಗಳ ಶೋಕಾಚರಣೆ ಘೋಷಿಸಿದೆ. ಈ ಮಧ್ಯೆ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಾಳೆ ಅಂದರೆ ಶನಿವಾರ (ಡಿ. 28) ನಡೆಯಲಿದೆ ಎಂಬ (Singh’s last rites).
Dr. Manmohan Singh 💔 —
— Saibpal Pandit (@PanditSaibpal) December 27, 2024
Tomorrow Former PM Dr Manmohan Singh's final journey to commence from AICC Headquarter to cremation ground at 9.30 am.
✊️✊️ pic.twitter.com/jpPgf2ICOa
ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ
ಮಾಜಿ ಪ್ರಧಾನಿ ಮನಮೋಹನ್ ಅವರು ಗುರುವಾರ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಶನಿವಾರಕ್ಕೆ ಮುಂದೂಡಲಾಗಿದೆ. ಅವರ ಮಕ್ಕಳು ಅಮೆರಿಕದಲ್ಲಿ ವಾಸಿಸುತ್ತಿದ್ದು, ಅವರು ಬರುವವರೆಗೂ ಅಂತ್ಯಕ್ರಿಯೆ ನಡೆಯುವಂತಿಲ್ಲ.ಇಂದು ಮಧ್ಯಾಹ್ನ 1 ಗಂಟೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪುತ್ರಿ ಅಮೆರಿಕದಿಂದ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿದ್ದವು.
ಕಾಂಗ್ರೆಸ್ ಹೇಳಿರುವಂತೆ, ಮನಮೋಹನ್ ಸಿಂಗ್ ಪುತ್ರಿ ಇಂದು ರಾತ್ರಿಯೇ ಅಮೆರಿಕದಿಂದ ವಾಪಸಾಗಲಿದ್ದಾರೆ. ಹೀಗಾಗಿ ಇಂದು ಅಂತ್ಯಕ್ರಿಯೆ ನಡೆಯುವುದಿಲ್ಲ. ಮೂಲಗಳ ಪ್ರಕಾರ, ನಾಳೆ ಬೆಳಗ್ಗೆ 8ರಿಂದ 10ರವರೆಗೆ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಇರಿಸಲಾಗುತ್ತದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಎಲ್ಲ ರಾಜಕೀಯ ಪ್ರಮುಖ ನಾಯಕರು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಅದರ ನಂತರ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆಯು ಕಾಂಗ್ರೆಸ್ ಪ್ರಧಾನ ಕಚೇರಿಯಿಂದಲೇ ಪ್ರಾರಂಭವಾಗಲಿದೆ.
ರಾಜ್ಘಾಟ್ ಬಳಿಯೇ ಬಹುತೇಕ ಮಾಜಿ ಪ್ರಧಾನಿಗಳ ಅಂತಿಮ ಸಂಸ್ಕಾರ ನಡೆದಿವೆ. ಹಾಗಾಗಿ ಡಾ.ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವೂ ಅಲ್ಲಿಯೇ ನೆರವೇರಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯ ಸಂಪೂರ್ಣ ಪ್ರಕ್ರಿಯೆಯಲ್ಲಿ ಸರ್ಕಾರವೂ ಭಾಗಿಯಾಗಿದೆ. ಆದ್ದರಿಂದ ಅನೇಕ ವಿಷಯಗಳು ಮನಮೋಹನ್ ಸಿಂಗ್ ಅವರ ಕುಟುಂಬ ಮತ್ತು ಸರ್ಕಾರದ ಮೇಲೆ ಅವಲಂಬಿತವಾಗಿವೆ. ಈ ಕಾರಣಕ್ಕಾಗಿ ಅವರ ಪುತ್ರಿಯರ ಅನುಪಸ್ಥಿತಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಸಿಲ್ಲ.
ಈ ಸುದ್ದಿಯನ್ನೂ ಓದಿ:Manmohan Singh: ಎರಡು ಅವಧಿಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಆಸ್ತಿ ಮೌಲ್ಯ ಇಷ್ಟೇನಾ? ನಿಜಕ್ಕೂ ಅಚ್ಚರಿಯಾಗುತ್ತೆ!