Monday, 12th May 2025

ಭಗವಂತ್ ಮಾನ್ ಎರಡನೇ ವಿವಾಹಕ್ಕೆ ಸಜ್ಜು

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಎರಡನೇ ಬಾರಿಗೆ ವಿವಾಹವಾಗಲಿದ್ದಾರೆ. ಮೂಲಗಳ ಪ್ರಕಾರ, ಮಾನ್ ಅವರು ನಾಳೆ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾಗಲಿದ್ದಾರೆ.

ಚಂಡೀಗಢದಲ್ಲಿ ಮದುವೆಯನ್ನು ಆಯೋಜಿಸಲಾಗುತ್ತಿದೆ. ಇದು ಖಾಸಗಿ ಸಮಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಪಂಜಾಬ್ ಸಿಎಂ ಭಗವಂತ್ ಮಾನ್ ಆರು ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದಾರೆ. ಅವರ ಇಬ್ಬರು ಮಕ್ಕಳೊಂದಿಗೆ ಯುನೈಟೆಡ್ ಸ್ಟೇಟ್ಸ್ನಲ್ಲಿ ವಾಸಿಸುತ್ತಿದ್ದಾರೆ.