ಶ್ರೀನಗರ: ಬಾಂಗ್ಲಾದೇಶ ಮತ್ತೊಮ್ಮೆ ಹೊತ್ತಿ ಉರಿಯುತ್ತಿದೆ. ಹಿಂದೂಗಳ ಮೇಲೆ, ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಯುತ್ತಿದೆ. ಇತ್ತ ನ. 24ರಂದು ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಯು ಈ ಮೊದಲು ದೇವಾಲಯವಾಗಿತ್ತೇ ಎಂದು ಪರಿಶೀಲನೆ ನಡೆಸಲು ಹೋದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಅದಾದ ಬಳಿಕ ನಡೆದ ಘರ್ಷಣೆಯಲ್ಲಿಈವರೆಗೆ ಐವರು ಸಾವನ್ನಪ್ಪಿದ್ದಾರೆ. ಈ ಎರಡೂ ಘಟನೆಗಳನ್ನು ಹೋಲಿಸಿದರೆ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ ಎಂದು ಜಮ್ಮ ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಮುಖ್ಯಸ್ಥೆ ಮೆಹಬೂಬಾ ಮುಫ್ತಿ (Mehbooba Mufti) ಹೇಳಿದ್ದಾರೆ.
ಸಂಭಾಲ್‌ನಲ್ಲಿ ನಡೆದ ಘಟನೆ ದುರದೃಷ್ಟಕರ ಎಂದು ಬಣ್ಣಿಸಿದ ಅವರು ಇದನ್ನು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದೊಂದಿಗೆ ಹೋಲಿಸಿದ್ದಾರೆ. ಆ ಮೂಲಕ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರ ಹಾಗೂ ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಎರಡು ಒಂದೇ. ಭಾರತ ಮತ್ತು ಬಾಂಗ್ಲಾದೇಶದಲ್ಲಿ ಅಲ್ಪ ಸಂಖ್ಯಾತರ ಮೇಲೆ ದಾಳಿ ನಡೆಯುತ್ತಿದೆ ಎಂದಿದ್ದಾರೆ.
"I don't find any difference between India and Bangladesh": Mehbooba Mufti
— ANI Digital (@ani_digital) December 1, 2024
Read @ANI Story | https://t.co/eVRtJUjSJX#MehboobaMufti #Sambhal #India #Bangladesh #ajmersharifdargah pic.twitter.com/92Ibk78qcw
ಮೆಹಬೂಬಾ ಮುಫ್ತಿ ಹೇಳಿದ್ದೇನು?
“1947ರಲ್ಲಿದ್ದ ಸ್ಥಿತಿಯತ್ತ ನಾವು ಸಾಗುತ್ತಿದ್ದೇವೆಯೇ ಎಂಬ ಭಯ ಕಾಡುತ್ತಿದೆ. ಯುವ ಜನತೆಗೆ ಉದ್ಯೋಗದ ಸಿಗುತ್ತಿಲ್ಲ. ನಮ್ಮಲ್ಲಿ ಉತ್ತಮ ಆಸ್ಪತ್ರೆ, ಶಿಕ್ಷಣವಿಲ್ಲ. ಅವರು (ಬಿಜೆಪಿ) ರಸ್ತೆಗಳ ಸ್ಥಿತಿಯನ್ನು ಸುಧಾರಿಸುತ್ತಿಲ್ಲ. ಆದರೆ ದೇವಾಲಯವನ್ನು ಹುಡುಕುತ್ತ ಮಸೀದಿಯನ್ನು ಕೆಡವಲು ಪ್ರಯತ್ನಿಸುತ್ತಿದ್ದಾರೆ. ಸಂಭಾಲ್ ಘಟನೆ ಅತ್ಯಂತ ದುರದೃಷ್ಟಕರ. ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಗುಂಡು ಹಾರಿಸಲಾಯಿತು” ಎಂದು ಮುಫ್ತಿ ಜಮ್ಮುವಿನಲ್ಲಿ ತಿಳಿಸಿದ್ದಾರೆ.
ಅಜ್ಮೀರ್ ಶರೀಫ್ ದರ್ಗಾದ ಸುತ್ತಲಿನ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಎಲ್ಲ ಧರ್ಮದ ಜನರು ಪ್ರಾರ್ಥನೆ ಸಲ್ಲಿಸುವ ಅಜ್ಮೀರ್ ಶರೀಫ್ ದರ್ಗಾ ಸಹೋದರತ್ವಕ್ಕೆ ದೊಡ್ಡ ಉದಾಹರಣೆ. ಈಗ ಅವರು ದೇವಾಲಯವನ್ನು ಹುಡುಕಲು ಅದನ್ನು ಅಗೆಯಲು ಪ್ರಯತ್ನಿಸುತ್ತಿದ್ದಾರೆʼʼ ಎಂದು ಹೇಳಿದ್ದಾರೆ.
ವ್ಯತ್ಯಾಸ ಕಾಣಿಸುತ್ತಿಲ್ಲ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಮಾತನಾಡಿದ ಮುಫ್ತಿ, “ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಭಾರತದಲ್ಲೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆದರೆ, ಭಾರತ ಮತ್ತು ಬಾಂಗ್ಲಾದೇಶದ ನಡುವಿನ ವ್ಯತ್ಯಾಸವೇನು? ಭಾರತ ಮತ್ತು ಬಾಂಗ್ಲಾದೇಶದ ನಡುವೆ ನನಗೆ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲʼʼ ಎಂದು ತಿಳಿಸಿದ್ದಾರೆ.
ಹಿಂದೂ ಮುಖಂಡ ಚಿನ್ಮಯ್ ಕೃಷ್ಣ ದಾಸ್ ಅವರನ್ನು ದೇಶದ್ರೋಹ ಆರೋಪದ ಮೇಲೆ ಬಂಧಿಸಿದ ಬಳಿಕ ಬಾಂಗ್ಲಾದೇಶದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಹಿಂಸಾಚಾರ ಭುಗುಲೆದ್ದಿದ್ದು, ಹಿಂದೂ ದೇವಾಲಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಬಾಂಗ್ಲಾದೇಶದಲ್ಲಿನ ಹಿಂದೂಗಳ ಸುರಕ್ಷತೆಯನ್ನು ಖಚಿತಪಡಿಸುವಂತೆ ಅಲ್ಲಿನ ಸರ್ಕಾರಕ್ಕೆ ಸೂಚಿಸಿದೆ. ಭಾರತದ ವಿವಿಧ ಕಡೆಗಳಲ್ಲಿ ಹಿಂದೂ ಸಂಘಟನೆ ಮುಖಂಡರು, ಬಿಜೆಪಿ ನಾಯಕರು ಬಾಂಗ್ಲಾ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ: Sambhal Violence: ಸಂಭಾಲ್ ಹಿಂಸಾಚಾರ; ದಂಗೆಕೋರರ ಫೋಟೊ ಬೀದಿ ಬೀದಿಗಳಲ್ಲಿ ಪ್ರಕಟ-ಗಲಭೆಕೋರರಿಂದಲೇ ನಷ್ಟ ವಸೂಲಿ!