Sunday, 11th May 2025

ನದಿ ಜೋಡಣೆಗೆ ಕೇಂದ್ರ ಸರ್ಕಾರ ಸಮ್ಮತಿ

ನವದೆಹಲಿ: ನದಿ ಜೋಡಣೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದ್ದು, ಈ ಬಗ್ಗೆ ರಾಜ್ಯ ಸರ್ಕಾರಗಳ ಅನುಮತಿ ಅಗತ್ಯ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಮುಂದಿನ 25 ವರ್ಷಗಳ ಅಭಿವೃದ್ಧಿ ಆಧಾರದಲ್ಲಿ ಪ್ರಧಾನ ಮಂತ್ರಿ ಗತಿಶಕ್ತಿ ಮಾಸ್ಟರ್ ಪ್ಲಾನ್ ಮೂಲಕ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಕಾವೇರಿ ಪೆನ್ನಾರ್ ನದಿ ಜೋಡಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅಲ್ಲದೇ ಗೋದಾವರಿ-ಕೃಷ್ಣ, ಕೃಷ್ಣ-ಪೆನ್ನಾರ್, ಪೆನ್ನಾರ್-ಕಾವೇರಿ ನದಿಗಳ ಜೋಡಣೆಗೂ ಅನುಮತಿ ನೀಡಲಾಗಿದೆ.