Wednesday, 14th May 2025

ಉಗ್ರಗಾಮಿಗಳಿಂದ ವಲಸೆ ಕಾರ್ಮಿಕರ ಮೇಲೆ ದಾಳಿ

ಶ್ರೀನಗರ: ದಕ್ಷಿಣ ಕಾಶ್ಮೀರ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಉಗ್ರಗಾಮಿಗಳು ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕ ರೊಬ್ಬರ ಮೇಲೆ ನಡೆಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ಉಗರ್ ಗುಂದ ಪ್ರದೇಶದಲ್ಲಿ ಉಗ್ರರು ಪಶ್ಚಿಮ ಬಂಗಾಳದಿಂದ ಬಂದಿದ್ದ ಮುನೀರ್-ಉಲ್-ಇಸ್ಲಾಮ್ ಎಂಬ ವಲಸೆ ಕಾರ್ಮಿಕನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ವಲಸೆ ಕಾರ್ಮಿಕನನ್ನು ಸ್ಥಳೀಯ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಒಂದು ತಿಂಗಳಲ್ಲಿ ಕಾಶ್ಮೀರದಲ್ಲಿ ವಲಸೆ ಕಾರ್ಮಿಕರು ಮತ್ತು ಅಲ್ಪಸಂಖ್ಯಾತ ಸಮುದಾಯದವರ ಮೇಲೆ ಉಗ್ರರು ನಡೆಸಿದ 5ನೇ ದಾಳಿ ಇದಾಗಿದೆ.